
ನಟ ದರ್ಶನ್
ಕೊಲೆ ಕೇಸಲ್ಲಿ ಜಾಮೀನು ರದ್ದು: ದರ್ಶನ್ ಮತ್ತೆ ಪೊಲೀಸ್ ವಶಕ್ಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ ಮತ್ತು ನಟ ದರ್ಶನ್ ಸೇರಿದಂತೆ ಡಿ ಗ್ಯಾಂಗ್ ನ 7 ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರದಿಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಆದೇಶ ಹೊರಬೀಳುತ್ತಿದ್ದಂತೆಯೇ, ಬೆಂಗಳೂರು ಪೊಲೀಸರು ತೀವ್ರ ದರ್ಶನ್ ಮತ್ತು ಅವರನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಎ1 (ಮೊದಲ ಆರೋಪಿ) ಆಗಿರುವ ಪವಿತ್ರಾ ಗೌಡ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ದರ್ಶನ್ ಅವರನ್ನು ಬಂಧಿಸಲು ನೈಸ್ ರಸ್ತೆಯ ಬಳಿ ಕಾಯುತ್ತಿದ್ದರೂ, ಕೊನೆಗೆ ಅವರು ಹೊಸಕೆರೆಹಳ್ಳಿಯಲ್ಲಿರುವ ತಮ್ಮ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಪೊಲೀಸರ ವಶವಾಗಿದ್ದಾರೆ.
ಜಾಮೀನು ರದ್ದಾಗಲು ಕಾರಣವೇನು?
ಕೊಲೆ ಪ್ರಕರಣದಂತಹ ಗಂಭೀರ ಅಪರಾಧದಲ್ಲಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ, ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಗಂಭೀರತೆ ಮತ್ತು ಸಾಕ್ಷ್ಯ ನಾಶದ ಸಾಧ್ಯತೆಯನ್ನು ಪರಿಗಣಿಸಿ ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಜಾಮೀನು ಪಡೆದಿದ್ದ ದರ್ಶನ್, ತೀವ್ರ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಬೇಕೆಂದು ಮನವಿ ಮಾಡಿದ್ದರು. ಆದರೆ, ಜಾಮೀನಿನ ಮೇಲೆ ಹೊರಬಂದ ನಂತರ ಅವರು ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿರಲಿಲ್ಲ ಎಂಬುದು ವರದಿಯಾಗಿದೆ. ಜಾಮೀನು ಷರತ್ತುಗಳ ದುರ್ಬಳಕೆಯ ಸಾಧ್ಯತೆ ಮತ್ತು ಪ್ರಕರಣದ ಸಂಕೀರ್ಣತೆಯನ್ನು ಪರಿಗಣಿಸಿ, ಸುಪ್ರೀಂ ಕೋರ್ಟ್ ಈ ಕಠಿಣ ನಿರ್ಧಾರ ಕೈಗೊಂಡಿದೆ.