ಟೆಂಡರ್‌ ಮೀಸಲಾತಿ | ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಇಲ್ಲ: ಸರ್ಕಾರದ ಸ್ಪಷ್ಟನೆ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ಟೆಂಡರ್‌ ಮೀಸಲಾತಿ | ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಇಲ್ಲ: ಸರ್ಕಾರದ ಸ್ಪಷ್ಟನೆ

ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.


Click the Play button to hear this message in audio format

ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ. ಆದರೆ, ಶೇ.4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿದ್ದಾರೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಒಂದು ದಿನ ಬಾಕಿ ಇರುವಾಗಲೇ ಮೀಸಲಾತಿ ವಿಚಾರ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್​ ಸರ್ಕಾರವನ್ನು ಧರ್ಮ ಸಂಕಷ್ಟಕ್ಕೆ ಸಿಲುಕಿಸಿತ್ತು. ಈ ಚರ್ಚೆ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುವುದನ್ನು ಮನಗಂಡ ಕಾಂಗ್ರೆಸ್​ ಸರ್ಕಾರ ಕೂಡಲೇ ಎಚ್ಚೆತ್ತು ಸ್ಪಷ್ಟನೆ ನೀಡಿದೆ.

ಈ ಹಿಂದೆ ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಂದಿಟ್ಟಿದ್ದು, ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

1 ಕೋಟಿ ರೂ. ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯವರಿಗೆ ಶೇ 4 ಮೀಸಲಾತಿ ನೀಡುವ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಅನುಮೋದನೆ ನೀಡಿರುವ ಸಿಎಂ, ತಿದ್ದುಪಡಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.

1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಪ್ರವರ್ಗ 2ಬಿ ಅಡಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದರು.

ಈ ಪತ್ರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ್, ಆಸೀಫ್ ಸೇಠ್, ಖತಿಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಿಲ್ಕಿಸ್ ಬಾನು ಸಹಿ ಮಾಡಿದ್ದರು. ಇದರಂತೆ, ಕಾಯ್ದೆಗೆ ತಿದ್ದುಪಡಿ ಮಾಡಿ ಕಡತ ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Read More
Next Story