Om Prakash Murder Case |ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ;  ಏಳು ದಿನ ಸಿಸಿಬಿ ಕಸ್ಟಡಿಗೆ ಪಲ್ಲವಿ
x
ಓಂ ಪ್ರಕಾಶ್‌ 

Om Prakash Murder Case |ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ; ಏಳು ದಿನ ಸಿಸಿಬಿ ಕಸ್ಟಡಿಗೆ ಪಲ್ಲವಿ

ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಎಸಿಪಿ ಧರ್ಮೇಂದ್ರ ಅವರು ಓಂ ಪ್ರಕಾಶ್‌ ಪತ್ನಿ ಪಲ್ಲವಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈಗಾಗಲೇ ಪಲ್ಲವಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಕೊಲೆಗೆ ಕಾರಣಗಳನ್ನು ಬಾಯ್ಬಿಡಿಸುತ್ತಿದ್ದಾರೆ.


ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಪಲ್ಲವಿಯನ್ನು ಸಿಸಿಬಿ ಅಧಿಕಾರಿಗಳು 7 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಎಸಿಪಿ ಧರ್ಮೇಂದ್ರ ಅವರು ಪಲ್ಲವಿ ವಿಚಾರಣೆ ನಡೆಸಿದ್ದಾರೆ. ಈಗಾಗಲೇ ಪಲ್ಲವಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಕೊಲೆಗೆ ಕಾರಣಗಳನ್ನು ಬಾಯಿ ಬಿಡಿಸುತ್ತಿದ್ದಾರೆ.

ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಪತ್ನಿ ಪಲ್ಲವಿಯನ್ನು ಮೇ 3ರವರೆಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಧೀಶರು ಆದೇಶಿಸಿದ್ದರು. ಈ ಮಧ್ಯೆ ಆರೋಪಿ ಪಲ್ಲವಿಯನ್ನು ಸಿಸಿಬಿ 7 ದಿನ ಕಸ್ಟಡಿಗೆ ಪಡೆದುಕೊಂಡಿದೆ.

ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾದ ಪುತ್ರಿ ಕೃತಿಯು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತಿ ವಿಚಾರಣೆಗೆ ಮಾನಸಿಕವಾಗಿ ಸದೃಢವಾಗಿದ್ದಾರೆ ಎಂದು ನಿಮ್ಹಾನ್ಸ್ ವೈದ್ಯರು ವರದಿ ನೀಡಿದ್ದರು.

ಓಂ ಪ್ರಕಾಶ್‌ ಹಾಗೂ ಪಲ್ಲವಿ ದಂಪತಿ ಮಧ್ಯೆ ಕೌಟುಂಬಿಕ ವಿಚಾರವಾಗಿ ಪದೇ ಪದೇ ಜಗಳವಾಗುತ್ತಿತ್ತು. ಭಾನುವಾರವೂ ಇಬ್ಬರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಓಂ ಪ್ರಕಾಶ್‌ ಅವರು ನನಗೆ ಗನ್‌ ತೋರಿಸಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದರು. ಆತ್ಮರಕ್ಷಣೆಗಾಗಿ ಖಾರದಪುಡಿ ಎರಚಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾಗಿ ವಿಚಾರಣೆ ವೇಳೆ ಪಲ್ಲವಿ ತಪ್ಪೊಪ್ಪಿಕೊಂಡಿದ್ದರು.

Read More
Next Story