Road Accident Near Dabaspet: Tragic Death of Four Bengaluru Residents
x

ಅಪಘಾತದ ರಭಸಕ್ಕೆ ಮುಂಭಾಗದಲ್ಲಿ ಸಂಪೂರ್ಣ ಜಖಂಗೊಂಡಿರುವ ಕಾರು.

Road Accident: ದಾಬಸ್‌ಪೇಟೆ ಬಳಿ ಭೀಕರ ಅಪಘಾತ: ಬೆಂಗಳೂರಿನ ನಾಲ್ವರ ದುರ್ಮರಣ

ಮೃತಪಟ್ಟವರನ್ನು ಗೋಪಾಲ್ (60), ಶಶಿಕಲಾ (55), ದೀಪಿಕಾ (35) ಮತ್ತು ಕಾರು ಚಾಲಕ ಗೋಪಾಲ್ (45) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಮಲ್ಲೇಶ್ವರದ ನಿವಾಸಿಗಳಾಗಿದ್ದರು.


ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಸಮೀಪ ಗುರುವಾರ (ಏಪ್ರಿಲ್ 10) ಕಾರೊಂದು ಡಿವೈಡರ್​ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತಪಟ್ಟವರನ್ನು ಗೋಪಾಲ್ (60), ಶಶಿಕಲಾ (55), ದೀಪಿಕಾ (35) ಮತ್ತು ಕಾರು ಚಾಲಕ ಗೋಪಾಲ್ (45) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಮಲ್ಲೇಶ್ವರದ ನಿವಾಸಿಗಳಾಗಿದ್ದರು. ಅಪಘಾತದಲ್ಲಿ ಗಾಯಗೊಂಡ ಇಬ್ಬರು ಮಕ್ಕಳು ದೀಪಿಕಾ ಅವರ ಮಕ್ಕಳೆಂದು ತಿಳಿದುಬಂದಿದೆ. ಗಾಯಾಳು ಮಕ್ಕಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಾರು ಬೆಂಗಳೂರಿನಿಂದ ತುಮಕೂರು ಕಡೆಗೆ ಸಂಚರಿಸುತ್ತಿತ್ತು ಹಾಗೂ ವೇಗವಾಗಿ ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡಿದೆ. ಅವರೆಲ್ಲರೂ ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಡೆಯಲಿರುವ ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ ಕಾರು ವೇಗವಾಗಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿ್ದೆ..

ತಕ್ಷಣವೇ ಧಾವಿಸಿದ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ, ಗಾಯದ ತೀವ್ರತೆಯಿಂದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More
Next Story