ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿರುವುದು.
Road Accidnet: ಹುಬ್ಬಳ್ಳಿಯಲ್ಲಿ ಕಾರು, ಲಾರಿ ಮುಖಾಮುಖಿ ಡಿಕ್ಕಿ: ಐವರು ಸಾವು
ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಯಿಂದ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ಕಾರು-ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ (29), ಅಂಜಲಿ (26), ಸಂದೀಪ (26), ವಿಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ. ಶವಗಳನ್ನು ಕೆಎಂಸಿ-ಆರ್‌ಐ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು 'ಪ್ರಜಾವಾಣಿ' ವರದಿ ಮಾಡಿದೆ.
ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಯಿಂದ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಸ್ಪಿ ಗೋಪಾಲ ಬ್ಯಾಕೋಡ ಮತ್ತು ಇನ್‌ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story