ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ: ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ
x

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ: ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ

ಜುಲೈ 15ರ ರಾತ್ರಿ, ಬೆಂಗಳೂರಿನ ಹಲಸೂರು ಕೆರೆಯ ಬಳಿ ಬಿಕ್ಲು ಶಿವನನ್ನು ದುಷ್ಕರ್ಮಿಗಳ ತಂಡವು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮೃತನ ತಾಯಿ ವಿಜಯಲಕ್ಷ್ಮಿ ಅವರು, ಶಾಸಕ ಬೈರತಿ ಬಸವರಾಜ್ ಅವರ ಕುಮ್ಮಕ್ಕಿನಿಂದಲೇ ಈ ಕೊಲೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು.


ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಐದನೇ ಆರೋಪಿಯಾಗಿರುವುದರಿಂದ, ಸಿಐಡಿ ತನಿಖೆಯು ಅವರಿಗೆ ಮತ್ತಷ್ಟು ಸಂಕಷ್ಟವನ್ನು ತಂದೊಡ್ಡುವ ಸಾಧ್ಯತೆಯಿದೆ.

ಜುಲೈ 15ರ ರಾತ್ರಿ, ಬೆಂಗಳೂರಿನ ಹಲಸೂರು ಕೆರೆಯ ಬಳಿ ಬಿಕ್ಲು ಶಿವನನ್ನು ದುಷ್ಕರ್ಮಿಗಳ ತಂಡವು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮೃತನ ತಾಯಿ ವಿಜಯಲಕ್ಷ್ಮಿ ಅವರು, ಶಾಸಕ ಬೈರತಿ ಬಸವರಾಜ್ ಅವರ ಕುಮ್ಮಕ್ಕಿನಿಂದಲೇ ಈ ಕೊಲೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಕಿತ್ತಕನೂರು ಬಳಿಯ ನಿವೇಶನಕ್ಕೆ ಸಂಬಂಧಿಸಿದಂತೆ ಬಸವರಾಜ್ ಮತ್ತು ಇತರರಿಂದ ತಮ್ಮ ಮಗನಿಗೆ ಪ್ರಾಣ ಬೆದರಿಕೆ ಇತ್ತು ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ಪ್ರಕರಣದಲ್ಲಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಗಾಗಲೇ ವಜಾಗೊಳಿಸಿದೆ. ಈ ನಡುವೆ, ಪ್ರಕರಣದ ಪ್ರಮುಖ ಆರೋಪಿಯು ದುಬೈಗೆ ಪಲಾಯನ ಮಾಡಿದ್ದಾನೆ ಎಂದು ವರದಿಯಾಗಿದೆ. ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಯ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆಗಾಗಿ ಪ್ರಕರಣವನ್ನು ಇದೀಗ ಸಿಐಡಿಗೆ ವರ್ಗಾಯಿಸಲಾಗಿದೆ.

Read More
Next Story