Rs 1.06 crore compensation distributed to the family of a power man who died on duty
x

ಸಿಎಂ ಸಿದ್ದರಾಮಯ್ಯ ಪರಿಹಾರ ವಿತರಣೆ ಮಾಡಿದರು.

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಇತ್ತೀಚೆಗೆ ಕರ್ತವ್ಯನಿರತದ ವೇಳೆ ಮೃತಪಟ್ಟ ಚೆಸ್ಕಾಂ ವ್ಯಾಪ್ತಿಯ ಪಾಂಡವಪುರ ಉಪ ವಿಭಾಗದ ಕಿರಿಯ ಪವರ್ ಮ್ಯಾನ್ ಮಹೇಶ್ (27 ವರ್ಷ) ಅವರ ತಂದೆ ಬೋರೇಗೌಡರಿಗೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.


ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಮಹೇಶ್ ಕುಟುಂಬಕ್ಕೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ) ವತಿಯಿಂದ 1.06 ಕೋಟಿ ರೂ. ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಇತ್ತೀಚೆಗೆ ಕರ್ತವ್ಯನಿರತದ ವೇಳೆ ಮೃತಪಟ್ಟ ಚೆಸ್ಕಾಂ ವ್ಯಾಪ್ತಿಯ ಪಾಂಡವಪುರ ಉಪ ವಿಭಾಗದ ಕಿರಿಯ ಪವರ್ ಮ್ಯಾನ್ ಮಹೇಶ್ (27 ವರ್ಷ) ಅವರ ತಂದೆ ಬೋರೇಗೌಡರಿಗೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಚೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ಮೈಸೂರು ವಿಭಾಗದ ಅಧೀಕ್ಷಕ ಎಂಜಿನಿಯರ್ ಸುನೀಲ್ ಇದ್ದರು.

Read More
Next Story