Permission Required for Prayers on Roads: Clarifies Priyank Kharge
x

ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ಗೆ ಸತ್ಯದ ಅರಿವಾಗಿದೆ; ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ- ಪ್ರಿಯಾಂಕ್‌ ಖರ್ಗೆ ತಿರುಗೇಟು

ಯಾವ ಸಂಘಗಳೇ ಆಗಲಿ, ಸಂವಿಧಾನದ ಮುಂದೆ ದೊಡ್ಡವರಲ್ಲ. ಈಗ ಆರ್‌ಎಸ್‌ಎಸ್‌ ಎಂಬ ಸಂಘಟನೆಗೆ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.


ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸವಾಲು ಹಾಕಿದರೆ ಬದುಕು ದುಸ್ಥರ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪರೋಕ್ಷವಾಗಿ ಆರ್‌ಎಸ್‌ಎಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ಯಾವ ಸಂಘಗಳೇ ಆಗಲಿ, ಸಂವಿಧಾನದ ಮುಂದೆ ದೊಡ್ಡವರಲ್ಲ. ಈಗ ಆರ್‌ಎಸ್‌ಎಸ್‌ ಎಂಬ ಸಂಘಟನೆಗೆ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುವ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

ಪ್ರತಿಯೊಂದು ಸಂಘ, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್‌ಎಸ್‌ಎಸ್‌ ತಮ್ಮ ಕಾರ್ಯಕ್ರಮ ನಡೆಸಬೇಕು. ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಪಥ ಸಂಚಲನದಲ್ಲಿ 300 ಜನರು ಮಾತ್ರ ಭಾಗವಹಿಸಬೇಕು. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಪಥ ಸಂಚಲನ ಮಾಡಬೇಕು. ಚಿತ್ತಾಪುರದ ಹೊರಗಿನವರು ಇದರಲ್ಲಿ ಭಾಗಿಯಾಗುವಂತಿಲ್ಲ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ ಎಂದು ನ್ಯಾಯಾಲಯವು ಷರತ್ತುಗಳನ್ನು ವಿಧಿಸಿದೆ. ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆ, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮ ಪೂರೈಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Read More
Next Story