
ಹರೀಶ್ ರಾಯ್ ಅವರು ನಿಧನ ಹೊಂದಿದ್ದಾರೆ.
ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ
ಉಪೇಂದ್ರ ನಿರ್ದೇಶನದ ಮತ್ತು ಶಿವರಾಜ್ ಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ 'ಓಂ' ಸಿನಿಮಾದಲ್ಲಿ 'ರಾಯ್' ಪಾತ್ರದ ಮೂಲಕ ಖ್ಯಾತಿ ಗಳಿಸಿದ್ದ ಹರೀಶ್ ರಾಯ್, ನಂತರ 'ನಲ್ಲ', 'ಜೋಡಿ ಹಕ್ಕಿ', 'ಸಂಜು ವೆಡ್ಸ್ ಗೀತಾ', 'ತಾಯವ್ವ' ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ಖಳನಟ, 'ಕೆಜಿಎಫ್' ಚಿತ್ರದ 'ಚಾಚಾ' ಖ್ಯಾತಿಯ ಹರೀಶ್ ರಾಯ್ (55)ಅವರು ನಿಧನ ಹೊಂದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ.
ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಬಹುಕಾಲದಿಂದ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಪ್ರಯೋಜನವಾಗಿರಲಿಲ್ಲ.
ಉಪೇಂದ್ರ ನಿರ್ದೇಶನದ ಮತ್ತು ಶಿವರಾಜ್ ಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ 'ಓಂ' ಸಿನಿಮಾದಲ್ಲಿ 'ರಾಯ್' ಪಾತ್ರದ ಮೂಲಕ ಖ್ಯಾತಿ ಗಳಿಸಿದ್ದ ಹರೀಶ್ ರಾಯ್, ನಂತರ 'ನಲ್ಲ', 'ಜೋಡಿ ಹಕ್ಕಿ', 'ಸಂಜು ವೆಡ್ಸ್ ಗೀತಾ', 'ತಾಯವ್ವ' ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಬ್ಲಾಕ್ ಬಸ್ಟರ್ ಚಿತ್ರಗಳಾದ 'ಕೆಜಿಎಫ್ ಚಾಪ್ಟರ್ 1' ಮತ್ತು 'ಕೆಜಿಎಫ್ ಚಾಪ್ಟರ್ 2' ಸಿನಿಮಾಗಳಲ್ಲಿ 'ಚಾಚಾ' ಪಾತ್ರದಲ್ಲಿ ಗಮನ ಸೆಳೆದಿದ್ದರು.
ಅನಾರೋಗ್ಯದ ಸಮಯದಲ್ಲಿ ಚಿಕಿತ್ಸೆಗಾಗಿ ನಟರಾದ ಯಶ್, ದರ್ಶನ್ ಸೇರಿದಂತೆ ಚಿತ್ರರಂಗದ ಹಲವರು ಆರ್ಥಿಕ ಸಹಾಯ ಮಾಡಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

