ಭೋವಿ ಅಭಿವೃದ್ಧಿ ನಿಗಮದಲ್ಲಿ ಹಗರಣ; ಮಾಜಿ ಪ್ರಧಾನ ವ್ಯವಸ್ಥಾಪಕನ ಬಂಧಿಸಿದ ಇ.ಡಿ
x

ಭೋವಿ ಅಭಿವೃದ್ಧಿ ನಿಗಮದಲ್ಲಿ ಹಗರಣ; ಮಾಜಿ ಪ್ರಧಾನ ವ್ಯವಸ್ಥಾಪಕನ ಬಂಧಿಸಿದ ಇ.ಡಿ

ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷ ತೋರಿಸಿ ಸಾರ್ವಜನಿಕರಿಂದ ದಾಖಲೆ, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡು ಅವ್ಯವಹಾರ ನಡೆಸಲಾಗಿತ್ತು.

ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಡಾ.ಬಿ.ಕೆ.ನಾಗರಾಜಪ್ಪ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ, ಏಳು ದಿನ ವಶಕ್ಕೆ ಪಡೆದಿದ್ದಾರೆ.

ಇ.ಡಿ. ಅಧಿಕಾರಿಗಳು ಶುಕ್ರವಾರವಷ್ಟೇ ನಾಗರಾಜಪ್ಪ ಸೇರಿದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಲೀಲಾವತಿ ಹಾಗೂ ಅಧೀಕ್ಷಕರಾಗಿದ್ದ ಪಿ.ಡಿ.ಸುಬ್ಬಪ್ಪ ಅವರಿಗೆ ಸೇರಿದ 10 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು.

ಈ ವೇಳೆ ಬ್ಯಾಂಕ್‌ ಖಾತೆಗಳ ವಿವರ, ಕೋಟ್ಯಂತರ ಮೌಲ್ಯದ ಸ್ಥಿರಾಸ್ತಿ, ಚರಾಸ್ತಿಗಳು ಲಭ್ಯವಾಗಿದ್ದವು. ಈ ನಾಗರಾಜಪ್ಪ ಅವರನ್ನು ವಿಚಾರಣೆ ನಡೆಸಲಾಯಿತು. ಆದರೆ, ಸರಿಯಾದ ಮಾಹಿತಿ ಹಿನ್ನೆಲೆಯಲ್ಲಿ ಬಂಧಿಸಲಾಯಿತು.

ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷ ತೋರಿಸಿ ಸಾರ್ವಜನಿಕರಿಂದ ದಾಖಲೆ, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡು ಅವ್ಯವಹಾರ ನಡೆಸಲಾಗಿತ್ತು.

ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

90 ಕೋಟಿ ರೂ. ಅವ್ಯವಹಾರ

ಭೋವಿ ಸಮುದಾಯದ ಜನರಿಗೆ ಸ್ವಯಂ ಉದ್ಯೋಗ ಸೃಷ್ಟಿಸಲು ರಾಜ್ಯ ಸರ್ಕಾರ ಭೋವಿ ಅಭಿವೃದ್ಧಿ ನಿಗಮಕ್ಕೆ 97 ಕೋಟಿ ರೂ. ಗಳನ್ನು ವಿತರಿಸಿತ್ತು. ಆದರೆ, ಅಧಿಕಾರಿಗಳು ಹಾಗೂ ಮದ್ಯಾವರ್ತಿಗಳು 500 ಫಲಾನುಭವಿಗಳ ನಕಲಿ ಖಾತೆಗಳನ್ನು ಸೃಷ್ಟಿಸಿ ಈ ಹಣವನ್ನು ಬೇರೆಡೆ ತಿರುಗಿಸಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು.

ತನಿಖೆ ವೇಳೆ ದೊರೆತ ಮಹತ್ವದ ಎಲೆಕ್ಟ್ರಾನಿಕ್ ಮತ್ತು ಕಾಗದ ಪಾತ್ರಗಳ ಸಾಕ್ಷ್ಯ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನು ಇದೇ ಪ್ರಕರಣದಲ್ಲಿ ಸಿ ಐ ಡಿ ಕೂಡ ತನಿಖೆ ನಡೆಸುತ್ತಿದೆ. ಸಿ ಐ ಡಿ ಅಧಿಕಾರಿ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಿದರೆಂದು ಆರೋಪಿಸಿ ಯುವ ಉದ್ಯಮಿ ಜೀವಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು.

Read More
Next Story