Covid-19| ರಾಜ್ಯದಲ್ಲಿ ಕೊರೊನಾಗೆ ಎರಡನೇ ಬಲಿ
x
ಕೋವಿಡ್‌

Covid-19| ರಾಜ್ಯದಲ್ಲಿ ಕೊರೊನಾಗೆ ಎರಡನೇ ಬಲಿ

ಬೆಳಗಾವಿ ತಾಲೂಕಿನ 70 ವರ್ಷದ ರೋಗಿ ಕೊರೊನಾದಿಂದ ಮೃತಪಟ್ಟಿದ್ದಾರೆ. ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆಯಾಗಿತ್ತು.


ರಾಜ್ಯದಲ್ಲಿ ಕೊರೊನಾಗೆ ಬೆಳಗಾವಿಯಲ್ಲಿ ವಯೋವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಇದೀಗ ರಾಜ್ಯದಲ್ಲಿ ಕೋವಿಡ್ ವೈರಸ್‌ನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ಬೆಳಗಾವಿ ತಾಲೂಕಿನ 70 ವರ್ಷದ ರೋಗಿ ಕೊರೊನಾದಿಂದ ಮೃತಪಟ್ಟಿದ್ದಾರೆ. ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ರೋಗಿಗೆ ಬುಧವಾರವಷ್ಟೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಆತನನ್ನು ತಕ್ಷಣವೇ ಕೋವಿಡ್ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಇವರು ವಯೋಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದರು. ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರೋಗಿಯ ಕುಟುಂಬಸ್ಥರು ಕೋವಿಡ್ ನಿಯಮಾವಳಿಯ ಪ್ರಕಾರ ರಾತ್ರಿಯೇ ಅಂತ್ಯಸಂಸ್ಕಾರ ಮಾಡಿದ್ದಾರೆ.

ಈ ಹಿಂದೆ ಬೆಂಗಳೂರಿನ ವೈಟ್ ಫೀಲ್ಡ್ ಮೂಲದ 85 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದರು. ಉಸಿರಾಟದ ಸಮಸ್ಯೆ, ಅಂಗಾಂಗ ವೈಫಲ್ಯ ಸಮಸ್ಯೆ ಇದ್ದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ಕೋವಿಡ್‌ನಿಂದ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದರು.

Read More
Next Story