ಏ.29ರಿಂದ ದ್ವಿತೀಯ ಪಿಯು ಪರೀಕ್ಷೆ-2 ಆರಂಭ: 1.60 ಲಕ್ಷ ವಿದ್ಯಾರ್ಥಿಗಳ ನೋಂದಣಿ
x

ಏ.29ರಿಂದ ದ್ವಿತೀಯ ಪಿಯು ಪರೀಕ್ಷೆ-2 ಆರಂಭ: 1.60 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಬರೆದು ಫಲಿತಾಂಶ ಪಡೆದವರು, ಇದೀಗ ತಮ್ಮ ಫಲಿತಾಂಶ ಉನ್ನತೀಕರಣಕ್ಕಾಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ- 2 ಬರೆಯಲಿದ್ದಾರೆ. ಸದ್ಯ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2 ಏ.29ರಿಂದ ಆರಂಭವಾಗಲಿದ್ದು, 1.60 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.

ವಿಜ್ಞಾನ ವಿಷಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಏಕೆಂದರೆ ಆ ವಿದ್ಯಾರ್ಥಿಗಳು ಮುಂದೆ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸೇರಬಯಸಿರುತ್ತಾರೆ. ಅಲ್ಲಿ ಸಿಇಟಿ ಅಂಕದ ಜತೆಗೆ, ದ್ವಿತೀಯ ಪಿಯು ಅಂಕಗಳನ್ನೂ ಪರಿಗಣಿಸಲಾಗುತ್ತದೆ. ಹಾಗಾಗಿ ಕಲಾ ಹಾಗೂ ವಾಣಿಜ್ಯ ವಿಭಾಗದ ವಿಧ್ಯರ್ಥಿಗಳಿಗಿಂತ ವಿಜ್ಞಾನ‌ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಪ್ರತಿ ವರ್ಷ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಲ್ಲಿ ಶೇ 80ರಷ್ಟು ವಿದ್ಯಾರ್ಥಿಗಳು ತೇರ್ಗಡೆಗಾಗಿ ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿದ್ದರು. ಇದೇ ಮೊದಲ ಬಾರಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಜತೆಗೆ, ತೇರ್ಗಡೆಯಾದವರ ಫಲಿತಾಂಶ ಉತ್ತಮಪಡಿಸಿಕೊಳ್ಳುವುದಕ್ಕಾಗಿ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪ್ರಸಕ್ತ ವರ್ಷ 1.28 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು.

ವಿಷಯವಾರು ಅಂತಿಮ ವೇಳಾಪಟ್ಟಿ

ವಿಷಯಗಳುದಿನಾಂಕ

ಕನ್ನಡ, ಅರೇಬಿಕ್

29-04-2024

ಇತಿಹಾಸ / ಭೌತಶಾಸ್ತ್ರ

30-04-2024

ಇಂಗ್ಲಿಷ್

02-05-2024

ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

03-05-2024

ಭೂಗೋಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲಗಣಿತ

04-05-2024

ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ

09-05-2024

ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

11-05-2024

ಅರ್ಥಶಾಸ್ತ್ರ

13-05-2024

ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ

14-05-2024

ಹಿಂದಿ

15-05-2024

ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್

16-05-2024

ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್‌ , ಆಟೋಮೊಬೈಲ್, ರೀಟೈಲ್

16-05-2024


Read More
Next Story