2nd PUC Result| ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ  ದ್ವಿತೀಯ
x

ಪ್ರಾತಿನಿಧಿಕ ಚಿತ್ರ.

2nd PUC Result| ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ ‌ 599 ಅಂಕಗಳನ್ನು ಪಡೆದು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಅವರು 600 ಕ್ಕೆ ‌597 ಅಂಕ ಪಡೆದಿದ್ದಾರೆ.


ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದೆ. 93.90 ಶೇ ಫಲಿತಾಂಶ ಪಡೆದು ಉಡುಪಿ ಮೊದಲ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ಎರಡನೇ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪಾಲಾಗಿದೆ.

ದಕ್ಷಿಣ ಕನ್ನಡದ ಎಕ್ಸ್​ಪರ್ಟ್​ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿಜ್ಞಾನ ವಿಭಾಗದ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ ‌ 599 ಅಂಕಗಳನ್ನು ಪಡೆದು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಅವರು 600 ಕ್ಕೆ ‌597 ಅಂಕ ಪಡೆದಿದ್ದಾರೆ.

2025ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕರ್ನಾಟಕ ಮಂಡಳಿಯು ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ನಡೆಸಿತ್ತು. 6,37,805 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ.

ಫಲಿತಾಂಶ ವೀಕ್ಷಣೆ ಹೇಗೆ?

ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://karresults.nic.in, kseab.karnataka.gov.in ಗೆ ಭೇಟಿ ನೀಡಬೇಕು. ಹೋಂ ಪೇಜ್‌ನಲ್ಲಿ ಕಾಣುವ Second PU Results 2025 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಬೇಕು. ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು. ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Read More
Next Story