Weather Updates | 5 ದಿನ ಈ ಜಿಲ್ಲೆಗಳಲ್ಲಿ ತೀವ್ರ ಚಳಿ; ಹವಾಮಾನ ಇಲಾಖೆ ಎಚ್ಚರಿಕೆ
x
ರಾಜ್ಯದಲ್ಲಿ ವಿಪರೀತ ಚಳಿ ಇರಲಿದೆ.

Weather Updates | 5 ದಿನ ಈ ಜಿಲ್ಲೆಗಳಲ್ಲಿ ತೀವ್ರ ಚಳಿ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ನಗರದಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 26-27 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ.


Click the Play button to hear this message in audio format

ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ. ಮುಂದಿನ ಮೂರು ದಿನ ಕನಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಇನ್ನೂ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಲಿದೆ. ಮಂಜು ಮುಸುಕಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ನಗರದಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್‌ ಮತ್ತು ಗರಿಷ್ಠ ತಾಪಮಾನ 26-27 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ. ಶುಷ್ಕ ವಾತಾವರಣವಿರಲಿದ್ದು, ಬೆಳಿಗ್ಗೆ, ರಾತ್ರಿ ಮಂಜು ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 5 ದಿನ ಹೊನ್ನಾವರ, ಬೆಳಗಾವಿ, ಬೀದರ್‌, ಕಲಬುರ್ಗಿ, ವಿಜಯಪುರ, ಹಾವೇರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ದಾವಣಗೆರೆ, ಚಿಂತಾಮಣಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಇರುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More
Next Story