ಶಿರೂರು ಗುಡ್ಡ ಕುಸಿತ | 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಅರ್ಜುನ್ ಲಾರಿ ಪತ್ತೆ
x
ಶಿರೂರು ಗುಡ್ಡಕುಸಿತ; ಅರ್ಜುನ್ ಲಾರಿ ಪತ್ತೆ

ಶಿರೂರು ಗುಡ್ಡ ಕುಸಿತ | 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಅರ್ಜುನ್ ಲಾರಿ ಪತ್ತೆ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಅರ್ಜುನ್ ಲಾರಿ ಪತ್ತೆಯಾಗಿದೆ.


Click the Play button to hear this message in audio format

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಅರ್ಜುನ್ ಲಾರಿ ಮೂರನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ.

ಈ ದುರ್ಘಟನೆಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಚಾಲನೆ ಮಾಡುತ್ತಿದ್ದ ಲಾರಿ, ಶನಿವಾರ ನಡೆಸಿದ 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಲಾರಿಗೆ ಹಗ್ಗ ಕಟ್ಟಿ ಮೇಲೆ ಎಳೆಯಲು ವ್ಯವಸ್ಥೆ ಮಾಡಿದ್ದು, ಲಾರಿ ಮೇಲೆತ್ತುವ ಕಾರ್ಯಾಚರಣೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

ಜುಲೈ 16 ರಂದು ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರ ಶವ ಪತ್ತೆಯಾಗಿತ್ತು. ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಲಾರಿ ಪತ್ತೆಯಾಗಿದೆ.

ಕಳೆದ ಆಗಸ್ಟ್ 13 ರಂದು ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಪತ್ತೆಯಾಗಿತ್ತು. ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿಯದೆ ಎಂದು ಲಾರಿ ಮಾಲೀಕ ಮುಫಿನ್ ಖಚಿತಪಡಿಸಿದ್ದರು. ಬಳಿಕ ಲಾರಿಯ ಎರಡು ಬಿಡಿ ಭಾಗಗಳಾದ ಲಾರಿ ಬಾಗಿಲಿನ ಕೀಲು ಕೂಡ ಪತ್ತೆಯಾಗಿತ್ತು. ಅದರಂತೆ ಶನಿವಾರ ಲಾರಿ ಸಿಕ್ಕಿದ್ದು, ಮೇಲೆತ್ತುವ ಕಾರ್ಯ ನಡೆಯುತ್ತಿದೆ.

Read More
Next Story