ಶಿವಮೊಗ್ಗ: ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್‌ ಕಾನ್‌ಸ್ಟೆಬಲ್
x

 ಸಾಂದರ್ಭಿಕ ಚಿತ್ರ 

ಶಿವಮೊಗ್ಗ: ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್‌ ಕಾನ್‌ಸ್ಟೆಬಲ್

ಮೊಹಮದ್‌ ಝಕ್ರಿಯ ಅವರು ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದರು. ಕೇವಲ ಮೂರು ದಿನಗಳ ಹಿಂದಷ್ಟೇ ಅವರು ರಜೆ ಮುಗಿಸಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು.


Click the Play button to hear this message in audio format

ಕರ್ತವ್ಯ ಮುಗಿಸಿ ಠಾಣೆಗೆ ಮರಳಿದ್ದ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್ ಒಬ್ಬರು ಠಾಣೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೃತರನ್ನು ಮೊಹಮದ್‌ ಝಕ್ರಿಯ (55) ಎಂದು ಗುರುತಿಸಲಾಗಿದೆ. ಹಿರಿಯ ಸಿಬ್ಬಂದಿಯೊಬ್ಬರು ಪೊಲೀಸ್ ಠಾಣೆಯ ಆವರಣದಲ್ಲೇ ಜೀವ ಕಳೆದುಕೊಂಡಿರುವುದು ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಜೆಯಿಂದ ಮರಳಿದ ಮೂರೇ ದಿನಕ್ಕೆ ದುರಂತ

ಪೊಲೀಸ್ ಮೂಲಗಳ ಪ್ರಕಾರ, ಮೊಹಮದ್‌ ಝಕ್ರಿಯ ಅವರು ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದರು. ಕೇವಲ ಮೂರು ದಿನಗಳ ಹಿಂದಷ್ಟೇ ಅವರು ರಜೆ ಮುಗಿಸಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರದಂದು ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಟ್ರಾಫಿಕ್ ಪಾಯಿಂಟ್‌ನಲ್ಲಿ ಅವರು ದಿನವಿಡೀ ಕರ್ತವ್ಯ ನಿರ್ವಹಿಸಿದ್ದರು. ಸಂಜೆ ಕರ್ತವ್ಯ ಮುಗಿಸಿ ಅವರು ಠಾಣೆಗೆ ವಾಪಸಾಗಿದ್ದರು. ಆದರೆ, ರಾತ್ರಿ ವೇಳೆಗೆ ಠಾಣೆಯ ಹಿಂಭಾಗದಲ್ಲಿರುವ ಸೆಲ್ (ಲಾಕಪ್‌ ಪ್ರದೇಶದ ಹಿಂಬದಿ) ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಎಸ್ಪಿ ಭೇಟಿ, ತನಿಖೆ ಚುರುಕು

ವಿಷಯ ತಿಳಿದ ತಕ್ಷಣ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಬಿ. ನಿಖಿಲ್ ಮತ್ತು ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಠಾಣೆಯಲ್ಲೇ ಆತ್ಮಹತ್ಯೆ ನಡೆದಿರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ಸಮಸ್ಯೆಯೇ ಅಥವಾ ಕೆಲಸದ ಒತ್ತಡವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.


(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್‌: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)

Read More
Next Story