ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ತೋರಿಸಲಿ; ಭೈರತಿ ಸುರೇಶ್‌ಗೆ ಕೇಂದ್ರ ಸಚಿವೆ ಶೋಭಾ ಸವಾಲು
ಭೈರತಿ ಸುರೇಶ್ ಅವರು ಮುಡಾದ ಸಾವಿರಾರು ಕಡತಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಕುರಿತು ನಾನು ದನಿ ಎತ್ತಿದ್ದಕ್ಕೆ ಭೈರತಿ ಸುರೇಶ್ ವೃಥಾರೋಪ ಮಾಡಿದ್ದಾರೆ. ನನ್ನ ವಿರುದ್ಧ ದಾಖಲೆ ಬಹಿರಂಗಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಸಲಹೆಗಾರ ಪೊನ್ನಣ್ಣ ಅವರನ್ನು ನೇಮಿಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವ ಭೈರತಿ ಸುರೇಶ್ ಅವರಿಗೆ ಸವಾಲು ಹಾಕಿದರು.
ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೈರತಿ ಸುರೇಶ್ ಅವರು ಮುಡಾದ ಸಾವಿರಾರು ಕಡತಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಕುರಿತು ನಾನು ದನಿ ಎತ್ತಿದ್ದಕ್ಕೆ ಭೈರತಿ ಸುರೇಶ್ ವೃಥಾರೋಪ ಮಾಡಿದ್ದಾರೆ. ನನ್ನ ವಿರುದ್ಧ ದಾಖಲೆ ಬಹಿರಂಗಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಸಲಹೆಗಾರ ಪೊನ್ನಣ್ಣ ಅವರನ್ನು ನೇಮಿಸಿದ್ದಾರೆ. ಪೊನ್ನಣ್ಣ ಅವರಿಗೂ ವಿದ್ಯುತ್ ಇಲಾಖೆಗೂ ಏನು ಸಂಬಂಧ ಎಂದು ಪ್ರಶ್ನಿಸಿದ ಅವರು, ನಕಲಿ ದಾಖಲೆ ಸೃಷ್ಟಿಸಲೆಂದೇ ಪೊನ್ನಣ್ಣ ಅವರನ್ನು ನೇಮಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮುಡಾ ದಾಖಲೆಗಳನ್ನು ಸುಟ್ಟು ಹಾಕಿದ ಭೈರತಿ ಸುರೇಶ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಈ ಭಯದಿಂದಲೇ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ತಾಕತ್ತಿದ್ದರೆ ನನ್ನ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನ್ಲಲಿ ಎನ್‌ಡಿಎ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಶಕ್ತಿ ಇರುವುದೇ ಬೂತ್ ಮಟ್ಟದಲ್ಲಿ. ಮೂರು ಕ್ಷೇತ್ರಗಳಲ್ಲಿ ನಮಗೆ ಉತ್ತಮ ವಾತಾವರಣ ಇದೆ. ಹಾಗಾಗಿ ನಮ್ಮ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲಲಿದ್ದಾರೆ ಎಂದು ಹೇಳಿದರು.