Mysore MUDA Scam| ಸಿದ್ದರಾಮಯ್ಯ ವಿರುದ್ಧ ಇ.ಡಿ. ಗೆ ದೂರು; ಕಾನೂನು ಕ್ರಮ ಎಂದ ಸಿದ್ದರಾಮಯ್ಯ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿ. ಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿರುವ ಇ.ಡಿ. ಜಂಟಿ ನಿರ್ದೇಶಕರಿಗೆ ಅಂಚೆ ಮೂಲಕ 16 ಪುಟಗಳ ದೂರು ಸಲ್ಲಿಸಲಾಗಿದೆ.
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ, ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ) ಹೊಸ ದೂರು ದಾಖಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇ.ಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿ. ಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿರುವ ಇ.ಡಿ. ಜಂಟಿ ನಿರ್ದೇಶಕರಿಗೆ ಅಂಚೆ ಮೂಲಕ 16 ಪುಟಗಳ ದೂರು ಸಲ್ಲಿಸಲಾಗಿದೆ.
' ಸಿದ್ದರಾಮಯ್ಯ ಅವರು ಪತ್ನಿ ಪಾರ್ವತಿ ಹೆಸರಿಗೆ ಮೈಸೂರು ನಗರಾಭಿವೃದ್ಧಿ ಪ್ರಾದಿಕಾರ (ಮುಡಾ)ದಿಂದ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದು, ಅದಕ್ಕಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಇಂತಹ ಹಲವು ಪ್ರಕರಣಗಳು ಮುಡಾದಲ್ಲಿ ನಡೆದಿದ್ದು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಬೇಕೆಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಸಿದ್ದರಾಮಯ್ಯ ಪ್ರತಿಕ್ರಿಯೆ
ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದರಲ್ಲದೆ ಇ.ಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು.
ಅಧಿಕಾರಿಗಳ ವಿರುದ್ಧ ಟೀಕೆ ಸರಿಯಲ್ಲ
ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆಯೂ ಟೀಕೆ ಮಾಡುತ್ತಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ರೇವ್ ಪಾರ್ಟಿ ವಿರುದ್ದ ಪೊಲೀಸರ ಕ್ರಮ
ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು,ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.