
ಸಿದ್ಧಾಂತ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಗೆ ಹೊಸದಾಗಿ ಆಪ್ಷನ್ಸ್ ದಾಖಲಿಗೆ ಅವಕಾಶ
ನ.16ರಂದು ಬೆಳಿಗ್ಗೆ 11ಗಂಟೆಯೊಳಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಸದ್ಯ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಡೆಯುತ್ತಿದ್ದು, ಅದರಲ್ಲೇ ಅವರು ಆಪ್ಷನ್ಸ್ ದಾಖಲಿಸುವುದರ ಮೂಲಕ ಭಾಗವಹಿಸಬೇಕು.
ಬೆಳಗಾವಿಯ ಅಥಣಿ ಎಸ್.ಎಚ್.ಎಂ.ಇ ಟ್ರಸ್ಟ್ ಸಿದ್ಧಾಂತ ಆರ್ಯುವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 2025ನೇ ಸಾಲಿಗೆ ಪ್ರವೇಶ ಪಡೆದಿರುವ 63 ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಎಲ್ಲ ಅಭ್ಯರ್ಥಿಗಳಿಗೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.
ನ.16ರಂದು ಬೆಳಿಗ್ಗೆ 11ಗಂಟೆಯೊಳಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಸದ್ಯ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಡೆಯುತ್ತಿದ್ದು, ಅದರಲ್ಲೇ ಅವರು ಆಪ್ಷನ್ಸ್ ದಾಖಲಿಸುವುದರ ಮೂಲಕ ಭಾಗವಹಿಸಬೇಕು.
ಈ ಸಂಬಂಧ ಎಲ್ಲ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆಯೂ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಪಿಜಿ ಆಯುಷ್: ಆಪ್ಷನ್ಸ್ ದಾಖಲಿಸಲು ನಾಳೆ ಕೊನೆ ದಿನ
ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲು ಮಾಡಲು ನ.16ರಂದು ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ನೀಡಲಾಗಿದೆ.
ನ.16ರಂದು ಸಂಜೆ 6 ಗಂಟೆಗೆ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಬಳಿಕ ಇಚ್ಛೆ/ಆಯ್ಕೆಗಳನ್ನು ಬದಲು ಮಾಡಿಕೊಳ್ಳಲು ನ.18ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ಇರಲಿದೆ. ಅಂದು ಮಧ್ಯಾಹ್ನ 2 ಗಂಟೆಗೆ ತಾತ್ಕಾಲಿಕ ಫಲಿತಾಂಶ, ನ.19ರಂದು ಬೆಳಿಗ್ಗೆ 11ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
ಸೀಟು ಹಂಚಿಕೆಯಾದವರು ನ.21ರೊಳಗೆ ಛಾಯ್ಸ್ ದಾಖಲು ಮಾಡಬೇಕು. ಛಾಯ್ಸ್ 1 ಮತ್ತು 2 ಆಯ್ಕೆ ಮಾಡಿದವರು ಶುಲ್ಕ ಪಾವತಿ ಮಾಡಬೇಕು. ಛಾಯ್ಸ್- 1 ಆಯ್ಕೆ ಮಾಡಿದವರು ನ. 22ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು.

