Bengaluru New Year | ಹೊಸ ವರ್ಷ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಸಜ್ಜು, ಪೊಲೀಸ್ ಬಿಗಿ ಬಂದೋಬಸ್ತ್‌
x
ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ

Bengaluru New Year | ಹೊಸ ವರ್ಷ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಸಜ್ಜು, ಪೊಲೀಸ್ ಬಿಗಿ ಬಂದೋಬಸ್ತ್‌

ರಾತ್ರಿ 9 ಗಂಟೆ ನಂತರ ನಗರದ ಪ್ರಮುಖ ಫ್ಲೈಓವರ್​ಗಳು​ ಬಂದ್ ಆಗಲಿವೆ. ಸಂಜೆ 7 ಗಂಟೆ ಬಳಿಕ ಎಂ.ಜಿ.ರಸ್ತೆ, ಚರ್ಚ್ ಸ್ಟ್ರೀಟ್‌ನಲ್ಲಿ ವಾಹನ ಸಂಚಾರ ಬಂದ್ ಆಗಲಿದ್ದು. ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ವಿಧಿಸಲಾಗಿದೆ.


Click the Play button to hear this message in audio format

ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಿದ್ದತೆಗಳು ನಡೆದಿವೆ. ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಪಡೆ ಎಲ್ಲಾ ರೀತಿಯಲ್ಲಿ ಸಜ್ಜಾಗಿದೆ. ಬೆಂಗಳೂರಿನ ಎಂ.ಜಿ ರೋಡ್, ಬ್ರಿಗೇಡ್‌ ರೋಡ್‌ನಲ್ಲಿ ಅಂತಿಮ ಹಂತದ ಸಿದ್ಧತೆ ಮುಗಿದಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಇಡೀ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗದಂತೆ ಜನತೆಗೆ ಅವರು ಮನವಿ ಮಾಡಿದ್ದು, ಬೆಂಗಳೂರು ನಗರ ಮತ್ತು ಇಡೀ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾವು ಗಲಭೆ ಮಾಡಲು ಬಯಸುವವರಿಗೆ ಎಚ್ಚರಿಕೆ ನೀಡಿದ್ದೇವೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗದಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ಹೊಸ ವರ್ಷವನ್ನು ಸಂತೋಷದಿಂದ ಆಚರಿಸಿ. ನಿಮಗೆ ಹೊಸ ವರ್ಷ ತುಂಬಾ ಸಂತೋಷವಾಗಿರಲಿ ಎಂದು ಅವರು ಮನವಿ ಮಾಡಿದ್ದಾರೆ.

11,830 ಪೊಲೀಸ್ ಸಿಬ್ಬಂದಿ ನಿಯೋಜನೆ

ಹಿರಿಯ ಅಧಿಕಾರಿಗಳು, ನಾಗರಿಕ ರಕ್ಷಣಾ ಸಿಬ್ಬಂದಿ ಸೇರಿದಂತೆ ಒಟ್ಟು 11,830 ಪೊಲೀಸ್ ಸಿಬ್ಬಂದಿ ಬೆಂಗಳೂರು ನಗರದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ ಮತ್ತು ರೇವ್ ಪಾರ್ಟಿಗಳು ಮತ್ತು ಮಾದಕವಸ್ತು ಸಂಬಂಧಿತ ಚಟುವಟಿಕೆಗಳ ಮೇಲೆ ನಿಗಾ ಇಡಲಿದ್ದಾರೆ. ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಹೊಸ ವರ್ಷ ಆಚರಿಸಲು ಸರ್ಕಾರ ಅನುಮತಿ ನೀಡಿದ್ದು, ಸಾರ್ವಜನಿಕರಿಗೆ ನಿಗದಿತ ಕಾಲಮಿತಿಯೊಳಗೆ ಮಾತ್ರ ಆಚರಿಸಲು ಅವಕಾಶ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯರ ಸುರಕ್ಷತೆಗೆ ಆದ್ಯತೆ

ಮಹಿಳೆಯರ ರಕ್ಷಣೆಗಾಗಿ ಪಬ್‌ಗಳಲ್ಲಿ ಲೇಡಿ ಬೌನ್ಸರ್ಸ್ ನಿಯೋಜನೆ ಮಾಡಲಾಗಿದೆ. ಮಹಿಳೆಯರಿಗಾಗಿ ಪ್ರತ್ಯೇಕ ಡ್ಯಾನ್ಸ್ ಫ್ಲೋರ್ ನಿರ್ಮಿಸಲಾಗಿದೆ. ಪತಿ-ಪತ್ನಿ, ಕಪಲ್ಸ್, ಲವರ್ಸ್‌ಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಲೇಡಿ ಬೌನ್ಸರ್ಸ್, ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಪಾರ್ಟಿ ನಂತರ ಮಹಿಳೆಯರನ್ನು ಮನೆಗೆ ತಲುಪಿಸಲು ಆದ್ಯತೆ ನೀಡಲಾಗುವುದು. ಸುರಕ್ಷಾ ಕ್ಯಾಬ್ ಸರ್ವೀಸ್ ಮೂಲಕ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು.

ರಾತ್ರಿ 1ರಿಂದ 2 ಗಂಟೆಯೊಳಗೆ ಅವಕಾಶ

ಎಂ.ಜಿ ರೋಡ್‌, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್‌ಗಳು ಈವೆಂಟ್‌ಗಳಿಗೆ ಹೆಸರುವಾಸಿಯಾಗಿದ್ದು, ಈ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್‌ ತುಕಡಿಗಳನ್ನು ನಿಯೋಜಿಸಲಾಗಿದೆ. ನಗರದಾದ್ಯಂತ 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಹೊಸವರ್ಷದ ಆಚರಣೆಗೆ ಬೆಂಗಳೂರು ಪೊಲೀಸರು ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದು,ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗಿದೆ. ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ಕಡ್ಡಾಯವಾಗಿದೆ. ರಾತ್ರಿ 1ರಿಂದ 2 ಗಂಟೆಯೊಳಗೆ ನ್ಯೂ ಇಯರ್​ ಸೆಲೆಬ್ರೇಷನ್​ ಮುಗಿಸಬೇಕು.

ವಾಹನ ಸಂಚಾರ ಬಂದ್

ರಾತ್ರಿ 9 ಗಂಟೆ ನಂತರ ನಗರದ ಪ್ರಮುಖ ಫ್ಲೈಓವರ್​ಗಳು​ ಬಂದ್ ಆಗಲಿವೆ. ಸಂಜೆ 7 ಗಂಟೆ ಬಳಿಕ ಎಂ.ಜಿ.ರಸ್ತೆ, ಚರ್ಚ್ ಸ್ಟ್ರೀಟ್ ವಾಹನ ಸಂಚಾರ ಬಂದ್ ಆಗಲಿದ್ದು. ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ವಿಧಿಸಲಾಗಿದೆ. ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ.

ನಮ್ಮ ಮೆಟ್ರೋ.. ಬಿಎಂಸಿಟಿ ಸಂಚಾರ ಅವಧಿ ವಿಸ್ತರಣೆ

ಹೊಸ ವರ್ಷದ ಆಚರಣೆಗೆ ಅವಕಾಶ ಕಲ್ಪಿಸಲು, ನಮ್ಮ ಮೆಟ್ರೋ ಜನವರಿ 1 ರಂದು 2:40 AM ವರೆಗೆ ವಿಸ್ತೃತ ಸೇವೆಗಳನ್ನು ನಡೆಸುತ್ತದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ (ಮೆಜೆಸ್ಟಿಕ್) ಅಂತಿಮ ರೈಲು 2:40 AMಕ್ಕೆ ಹೊರಡಲಿದೆ. ಆದರೆ ರೈಲುಗಳು ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ. 2ಕ್ಕೆ ಸಿಲ್ಕ್ ಇನ್‌ಸ್ಟಿಟ್ಯೂಟ್, ಮಾದಾವರ, ಚಲ್ಲಘಟ್ಟ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ)ನಿಂದ ಹೊರಡಲಿದೆ.

ಮೆಟ್ರೋ ಪ್ರಯಾಣಕ್ಕಾಗಿ ಟೋಕನ್‌ಗಳನ್ನು ಬಳಸುವ ಬದಲು 50 ರೂಪಾಯಿ ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಖರೀದಿಸಲು BMRCL ಶಿಫಾರಸು ಮಾಡಿದೆ. ಪ್ರಯಾಣಿಕರು ಮೆಟ್ರೋ ಪ್ರಯಾಣ ಕಾರ್ಡ್‌ಗಳು ಮತ್ತು ಕ್ಯೂಆರ್ ಕೋಡ್ ಟಿಕೆಟ್‌ಗಳನ್ನು ಬಳಸಬಹುದು. ಈ ಕಾಗದದ ಟಿಕೆಟ್‌ಗಳು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಡಿಸೆಂಬರ್ 31 ರಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿರುತ್ತವೆ.

ಜನಸಂದಣಿಯನ್ನು ಕಡಿಮೆ ಮಾಡಲು, ವೈಟ್‌ಫೀಲ್ಡ್ ಅಥವಾ ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ಕಡೆಗೆ ಹೋಗುವ ಪ್ರಯಾಣಿಕರು ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹತ್ತಲು ಸಲಹೆಯನ್ನು ನೀಡಿದೆ. ಅದೇ ರೀತಿ ಚಲ್ಲಘಟ್ಟ ಮತ್ತು ಮಾದಾವರ ಕಡೆಗೆ ಹೋಗುವವರು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣವನ್ನು ಬಳಸಲು ಸೂಚಿಸಲಾಗಿದೆ.

ಕುಡಿದು ಕಿರಿಕ್ ಮಾಡಿದರೆ ದಂಡ!

ಕುಡಿದು ಬಂದು ಮಹಿಳೆಯರ ಜೊತೆಗೆ ಕಿರಿಕ್ ಮಾಡಿದರೆ, 500 ರುಪಾಯಿ ದಂಡ ವಿಧಿಸುವುದಾಗಿ ಬಿಎಂಆರ್​ಸಿಎಲ್ ತಿಳಿಸಿದೆ. ಮಹಿಳೆಯರಿಗೆ ತೊಂದರೆ ನೀಡಿದರೆ ಅಂಥವರನ್ನು ಪೋಲಿಸ್ ವಶಕ್ಕೆ ನೀಡಲಾಗುವುದು ಎಂದೂ ತಿಳಿಸಿದೆ. 31 ರ ರಾತ್ರಿ ಮಹಿಳೆಯರ ಸುರಕ್ಷತೆಗಾಗಿ ಪ್ರತಿ ಮೆಟ್ರೋ ಕೋಚ್​​ನಲ್ಲೂ ಮಹಿಳಾ ಸೆಕ್ಯುರಿಟಿ ಮತ್ತು ಪ್ಯಾಟ್ರೋಲ್ ಟೀಮ್ ನೇಮಕ ಮಾಡಲಾಗಿದೆ.

ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೇವೆ

ಬಿಎಂಟಿಸಿ ಕೂಡ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ವಿವಿಧ ಭಾಗಗಳಿಂದ ರಾತ್ರಿ ಎರಡು ಗಂಟೆವರೆಗೆ ಹೆಚ್ಚುವರಿ ಬಸ್ಸುಗಳು ಸಂಚಾರ ಮಾಡಲಿವೆ. ಎಂಜಿ ರೋಡ್​ನಿಂದ ನಗರದ ಒಟ್ಟು 13 ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಈ ಬಸ್​ಗಳು ರಾತ್ರಿ 11 ಗಂಟೆಯಿಂದ ನಸುಕಿನ ಜಾವ 2 ಗಂಟೆಯವರೆಗೆ ಸಂಚರಿಸಲಿವೆ. ಜೊತೆಗೆ ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್​ಗಳಿಂದಲೂ ಬಸ್ ವ್ಯವಸ್ಥೆ ಮಾಡಲಾಗಿದೆ. ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆ, ಎಲೆಕ್ಟ್ರಾನಿಕ್​ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ಜನಪ್ರಿಯ ಟೌನ್​ಶಿಪ್, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್​.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಬನಶಂಕರಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್​ನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

1,000 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಭದ್ರತೆಯನ್ನು ಹೆಚ್ಚಿಸಲು ವಿವಿಧ ಇಲಾಖೆಗಳಿಂದ ಬೆಂಗಳೂರಿನಾದ್ಯಂತ 1,000 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕ ಸುರಕ್ಷತೆ ಮತ್ತು ನಗರದ ಖ್ಯಾತಿಯು ಪ್ರಮುಖ ಆದ್ಯತೆಯಾಗಿದೆ. ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುವುದು. 1,000 ಕ್ಕೂ ಹೆಚ್ಚು ಕ್ಯಾಮೆರಾಗಳು ಪೊಲೀಸ್‌ ಕಣ್ಗಾವಳಿನಲ್ಲಿ ಇರುತ್ತದೆ. ಯಾವುದೇ ಅಹಿತಕರ ಘಟನೆ ನಡೆದರೆ ಪೊಲೀಸರು ತ್ವರಿತವಾಗಿ ಪರಿಹರಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

Read More
Next Story