ಪ್ರಜ್ವಲ್ ರೇವಣ್ಣನಿಂದ ಕುಟುಂಬ ಸಹಾಯಕಿ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ; ಎರಡನೇ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ
x
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ

ಪ್ರಜ್ವಲ್ ರೇವಣ್ಣನಿಂದ ಕುಟುಂಬ ಸಹಾಯಕಿ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ; ಎರಡನೇ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ಎರಡನೇ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಆತನ ಕುಟುಂಬದ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಉಲ್ಲೇಖಿಸಲಾಗಿದೆ.


Click the Play button to hear this message in audio format

ಹಾಸನದ ಮಾಜಿ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನ ವಿರುದ್ಧ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ಎರಡನೇ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಆತನ ಕುಟುಂಬದ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

ಪ್ರಜ್ವಲ್ ರೇವಣ್ಣನ ಮೇಲೆ "ನಿಯಂತ್ರಣ ಅಥವಾ ಪ್ರಾಬಲ್ಯದ ಸ್ಥಾನದಲ್ಲಿದ್ದಾಗ" (ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (2) (ಕೆ)), ಲೈಂಗಿಕ ಕಿರುಕುಳ ಮತ್ತು ಸಂತ್ರಸ್ತೆಗೆ ಕ್ರಿಮಿನಲ್ ಬೆದರಿಕೆ ಆರೋಪದಡಿ ಅತ್ಯಾಚಾರ ಆರೋಪ ಹೊರಿಸಲಾಗಿದೆ.

1,632 ಪುಟಗಳ ಚಾರ್ಜ್‌ಶೀಟ್, 113 ಸಾಕ್ಷಿಗಳು, ಮೇ 5 ರಂದು ಮೈಸೂರು ಸಮೀಪದ ಫಾರ್ಮ್‌ಹೌಸ್‌ನಿಂದ ಮಧ್ಯವಯಸ್ಕ ಮಹಿಳೆಯನ್ನು ರಕ್ಷಿಸಿದ ನಂತರ ಮೇ 8 ರಂದು ಎಸ್‌ಐಟಿ ದಾಖಲಿಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದೆ. ಪ್ರಜ್ವಲ್ ರೇವಣ್ಣ ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ವೀಡಿಯೊಗಳು ವೈರಲ್‌ ಆದ ಬಳಿಕ ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ಮತ್ತು ಆಕೆಯ ಪತಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಹೆಚ್ ಡಿ ರೇವಣ್ಣ ಅವರ ತೋಟದಲ್ಲಿ ಕೆದಲಸ ಮಾಡುತ್ತಿದ್ದರು. 2021 ರಲ್ಲಿ ತೋಟಕ್ಕೆ ಭೇಟಿ ನೀಡಿದಾಗ, ಪ್ರಜ್ವಲ್ ರೇವಣ್ಣ ಸಂತ್ರಸ್ತೆಯನ್ನು ತನ್ನ ಕೋಣೆಗೆ ಕರೆದು ದೌರ್ಜನ್ಯ ನಡೆಸಿದ್ದ. ಅಲ್ಲದೇ ತಾನು ಮಾಡಿರುವ ದೌರ್ಜನ್ಯದ ವಿಡಿಯೋವನ್ನು ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಪ್ರಜ್ವಲ್ ರೇವಣ್ಣನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಇ ಅಡಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ರೆಕಾರ್ಡ್ ಮಾಡಿ ಹಂಚಿಕೊಂಡಿದ್ದಕ್ಕಾಗಿ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪವನ್ನೂ ಹೊರಿಸಲಾಗಿದೆ. ಫೋರೆನ್ಸಿಕ್ ವರದಿಗಳಿಂದ ಪ್ರಜ್ವಲ್‌ ರೇವಣ್ಣ ದೌರ್ಜನ್ಯ ನಡೆಸಿರುವುದು ಬೆಳಕಿಗೆ ಬಂದಿದೆ ಎಂದು ಎಸ್‌ಐಟಿ ಹೇಳಿದೆ.

Read More
Next Story