ಕುಮಾರಸ್ವಾಮಿ ವಿರುದ್ಧ ದೋಷಾರೋಪ | ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್‌ಐಟಿ ಪತ್ರ
x
ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್​ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.

ಕುಮಾರಸ್ವಾಮಿ ವಿರುದ್ಧ ದೋಷಾರೋಪ | ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್‌ಐಟಿ ಪತ್ರ

ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಎಸ್​ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.


2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಎಸ್​ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.

ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್‌ಎವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ.

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್​ಐಟಿ, 2023 ನವೆಂಬರ್ 21ರಂದು ರಾಜ್ಯಪಾಲ ತಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಕೋರಿಕೆ ಸಲ್ಲಿಸಿತ್ತು. ಈ ಸಂಬಂಧ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29ರಂದು ಎಸ್​ಐಟಿಗೆ ಪತ್ರ ಬರೆದಿದ್ದರು.

ಏನಿದು ಪ್ರಕರಣ?

2007ರಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಿಯಮಗಳನ್ನು ಉಲ್ಲಂಘಿಸಿ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ಗುತ್ತಿಗೆ ನೀಡಿರುವ ಆರೋಪ ಬಂದಿತ್ತು. ಈ ಬಗ್ಗೆ 2015ರಲ್ಲಿ ಎಸ್‌ಐಟಿ ವಿಚಾರಣೆ ನಡೆಸಿತ್ತು. ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ತನಿಖಾ ತಂಡದ ಅವಧಿಯನ್ನು ವಿಸ್ತರಿಸಿ ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಅಕ್ರಮ ಗಣಿಗಾರಿಕೆ ತನಿಖೆಗಾಗಿ ಲೋಕಾಯುಕ್ತದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಅದು ನಿಷ್ಕ್ರಿಯಗೊಂಡಿದೆ ಎಂಬ ಹಿನ್ನೆಲೆಯಲ್ಲಿ ಇದೀಗ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.

ಆ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ, ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಕೋರಿಕೆ ಸಲ್ಲಿಸಿದೆ.

Read More
Next Story