ಅಳಿಯ ಸಿದ್ಧಾರ್ಥ ಸಾವಿನಿಂದ ತೀವ್ರ ನೊಂದಿದ್ದ ಎಸ್ಎಂ ಕೃಷ್ಣ
x
ಅಳಿಯ ಸಿದ್ಧಾರ್ಥ ಹೆಗ್ಡೆ ಸಾವಿನಿಂದ ಎಸ್‌ ಎಂ ಕೃಷ್ಣ ತೀವ್ರವಾಗಿ ನೊಂದಿದ್ದರು.

ಅಳಿಯ ಸಿದ್ಧಾರ್ಥ ಸಾವಿನಿಂದ ತೀವ್ರ ನೊಂದಿದ್ದ ಎಸ್ಎಂ ಕೃಷ್ಣ

ಎಸ್ಎಂ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಅಳಿಕ ಸಿದ್ಧಾರ್ಥ ಹೆಗ್ಡೆ ಅವರು ಸಾವಿನಿಂದ ತೀವ್ರವಾಗಿ ಮಾನಸಿಕವಾಗಿ ಕುಗ್ಗಿ ಹೋಗಿದ್ದರು.


Click the Play button to hear this message in audio format

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್ಎಂ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಅಳಿಯ ಸಿದ್ಧಾರ್ಥ ಹೆಗ್ಡೆ ಅವರು ಸಾವಿನಿಂದ ತೀವ್ರವಾಗಿ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಕೆಫೆ ಕಾಫಿ ಡೇ ಮಾಲೀಕ ಎಸ್​ಎಂ ಕೃಷ್ಣ ಅವರ ಅಳಿಯ 2019ರ ಜುಲೈ 29 ರಂದು ಮಂಗಳೂರಿನ ನೇತ್ರಾವದಿ ನದಿಗೆ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದರು.

ಜುಲೈ 29 ರಂದು ನಾಪತ್ತೆಯಾದ ಸಿದ್ಧಾರ್ಥ ಹೆಗ್ಡೆ ಮಂಗಳೂರಿನ ನೇತ್ರಾವತಿ ನದಿಯಲ್ಲಿ ಮೃತದೇಹ ಜುಲೈ 31 ರಂದು ಪತ್ತೆಯಾಗಿತ್ತು. ಈ ಸುದ್ದಿಯಿಂದಾಗಿ ಸಿದ್ಧಾರ್ಥ ಕುಟುಂಬಸ್ಥರು ಕುಗ್ಗಿ ಹೋಗಿದ್ದರು. ಈ ಪೈಕಿ ಎಸ್ಎಂ ಕೃಷ್ಣ ತೀವ್ರ ನೊಂದುಕೊಂಡಿದ್ದರು. ಸಿದ್ಧಾರ್ಥ ಹೆಗ್ಡೆ ಘಟನೆಯಿಂದ ಹೊರಬರಲು ತೀವ್ರ ಚಡಪಡಿಸಿದ್ದರು. ದೈಹಿಕವಾಗಿಯೂ ಕುಗ್ಗಿ ಹೋದ ಎಸ್​ ಎಂ ಕೃಷ್ಣ ಪದೇ ಪದೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಈ ಘಟನೆ ಎಸ್ಎಂ ಕೃಷ್ಣ ಅವರನ್ನು ಬಹುವಾಗಿ ಕಾಡಿತ್ತು. ಇದೇ ಅವರ ಆರೋಗ್ಯವನ್ನು ಮತ್ತಷ್ಟು ಕ್ಷೀಣಿಸುವಂತೆ ಮಾಡಿತ್ತು.

2019ರಿಂದ ಸತತವಾಗಿ ಎಸ್‌.ಎಂ. ಕೃಷ್ಣ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ. ವಯೋಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎಸ್ಎಂ ಕೃಷ್ಣ ಅವರು ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ದ್ದರು. ಡಿ.10ಎಂದು ಬೆಳಗ್ಗೆ 2.30ರ ಸುಮಾರಿಗೆ ಮನೆಯಲ್ಲಿ ವಿಧಿವಶರಾಗಿದ್ದಾರೆ.

Read More
Next Story