ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿಣಿ | ಗಾಂಧಿ ಪರಂಪರೆಗೆ ಬೆದರಿಕೆ; ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಭಾರತದ ಸ್ವಾತಂತ್ರ್ಯದ ಹೋರಾಟದ ಮಹತ್ವದ ಮೈಲಿಗಲ್ಲು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬರೆದಿರುವ ಪತ್ರದ ಸಂದೇಶದಲ್ಲಿ ಬಣ್ಣಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ʼಗಾಂಧಿ ಭಾರತʼ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ನಾಯಕಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಎಬ್ಲ್ಯೂಸಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗೈರು ಹಾಜರಾಗಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ ಪತ್ರ ಬರೆದು ಸಂದೇಶ ರವಾನಿಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಭಾರತದ ಸ್ವಾತಂತ್ರ್ಯದ ಹೋರಾಟದ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.
ಪ್ರಸ್ತುತ, ಗಾಂಧಿ ಪರಂಪರೆಗೆ ನವದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದವರು ಹಾಗೂ ಅದರ ಸೈದ್ಧಾಂತಿಕ ಸಂಸ್ಥೆಗಳಿಂದ ದೊಡ್ಡ ಬೆದರಿಕೆ ಇದೆ. ಈ ಸಂಘಟನೆಗಳು ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಮಹಾತ್ಮ ಗಾಂಧಿ ಹತ್ಯೆ ಮಾಡಿದವಲ್ಲದೇ ಅವರ ವಿಚಾರಧಾರೆಗಳನ್ನು ಧಿಕ್ಕರಿಸುವ ಪ್ರಯತ್ನ ಮಾಡುತ್ತಿವೆ. ಗಾಂಧಿ ಹತ್ಯೆಯ ನಂತರ ದ್ವೇಷದ ವಾತಾವರಣ ನಿರ್ಮಾಣವಾಗಿದೆ. ಕೊಲೆಗಾರರೇ ವಿಜೃಂಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಪಕ್ಷದ ಎದುರಿರುವ ಸಮಸ್ಯೆಗಳ ವಿರುದ್ಧ ಹೋರಾಟ ಅಗತ್ಯವಾಗಿದೆ. ಪಕ್ಷ ಸಂಘಟನೆ ಬಲಗೊಳಿಸಿ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕಾಗಿದೆ ಎಂದು ಸಂದೇಶ ನೀಡಿದ್ದಾರೆ.