
ಗಾಯಕ ಸೋನು ನಿಗಮ್
Sonu Nigam| ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಸೋನು ನಿಗಂ
ತಮ್ಮ ಮೇಲೆ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡಬೇಕು ಎಂದು ಸೋನು ನಿಗಮ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು,ಮಂಗಳವಾರ ವಿಚಾರಣೆ ನಡೆಯಬೇಕಿತ್ತು. ಆದರೆ ಅವರ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 15ಕ್ಕೆ ಮುಂದೂಡಿದೆ.
ಕನ್ನಡ ಮತ್ತು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಯಕ ಸೋನು ನಿಗಮ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸೋನು ನಿಗಮ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಬೇಕಿತ್ತು. ಆದರೆ, ಹೈಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದೆ.
ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡನ್ನು ಕೇಳಿದ್ದಕ್ಕೆ ಸೋನು ನಿಗಮ್ ಅವರು ಪಹಲ್ಗಾಮ್ ದಾಳಿಗೆ ಹೋಲಿಸಿ ಕನ್ನಡಿಗರನ್ನು ನಿಂದಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಆಕ್ಷೇಪಾರ್ಹ ಹೇಳಿಕೆಗಾಗಿ ಕರವೇ ಕಾರ್ಯಕರ್ತರು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಯಕನ ವಿರುದ್ಧ ದೂರು ದಾಖಲಿಸಿದ್ದರು.
ಏನಿದು ಘಟನೆ?
ಸಂಗೀತ ಕಾರ್ಯಕ್ರಮವೊಂದರಲ್ಲಿ ಅಭಿಮಾನಿಯೊಬ್ಬರು ಕನ್ನಡ ಹಾಡನ್ನು ಹಾಡುವಂತೆ ಕೇಳಿಕೊಂಡಿದ್ದಕ್ಕೆ ಸೋನು ನಿಗಮ್ ಅವರು ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳು ಮತ್ತು ಕನ್ನಡ ಚಿತ್ರರಂಗವು ಅವರನ್ನು ಬ್ಯಾನ್ ಮಾಡಿತ್ತು. ಪೊಲೀಸರು ವಿಚಾರಣೆಗಾಗಿ ನೋಟಿಸ್ ಕೂಡ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳ ನಂತರ ಸೋನು ನಿಗಮ್ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಕನ್ನಡಿಗರ ಕ್ಷಮೆಯನ್ನು ಕೋರಿದ್ದರು.