ಧರ್ಮಸ್ಥಳ ಸೌಜನ್ಯ ಪ್ರಕರಣ | ಮರು ತನಿಖೆ ಕೋರಿದ್ದ ಅರ್ಜಿ ವಜಾ
x

ಧರ್ಮಸ್ಥಳ ಸೌಜನ್ಯ ಪ್ರಕರಣ | ಮರು ತನಿಖೆ ಕೋರಿದ್ದ ಅರ್ಜಿ ವಜಾ


ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ನ ವಿಭಾಗೀಯ ಪೀಠ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸೌಜನ್ಯ ತಂದೆ ಚಂದಪ್ಪ ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೂಡ ನ್ಯಾಯಾಲಯ ವಜಾಗೊಳಿಸಿದೆ.

ಹಾಗೆಯೇ, ಪ್ರಕರಣದಲ್ಲಿ ನಿರಪರಾಧಿಯೆಂದು ಹೊರ ಬಂದ ಸಂತೋಷ್ ರಾವ್ ತನಗೆ ಪರಿಹಾರ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಕೂಡ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ

2012ರ ಅಕ್ಟೋಬರ್‌ 9ರಂದು ಸೌಜನ್ಯ ಎಂಬ ಯುವತಿಯನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್‌ ರಾವ್‌ ಎಂಬಾತನನ್ನು ಬಂಧಿಸಿದ್ದರು. ನಂತರ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದ್ದು, ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ಅವರನ್ನು 2023ರ ಜೂನ್‌ 16ರಂದು ಖುಲಾಸೆಗೊಳಿಸಿತ್ತು.

ಬಳಿಕ ಕರಾವಳಿ ಭಾಗದಲ್ಲಿ ಈ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದಿದ್ದವು.

Read More
Next Story