SSLC Exams | ವೈರಲ್ ಆಗುತ್ತಿವೆ ಎಸ್​ಎಸ್​ಎಲ್​ಸಿ ಪರೀಕ್ಷೆಯ ನಕಲಿ ಪ್ರಶ್ನೆ ಪತ್ರಿಕೆ
x

ಎಸ್‌ಎಸ್‌ಎಲ್‌ಸಿ ನಕಲಿ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. 

SSLC Exams | ವೈರಲ್ ಆಗುತ್ತಿವೆ ಎಸ್​ಎಸ್​ಎಲ್​ಸಿ ಪರೀಕ್ಷೆಯ ನಕಲಿ ಪ್ರಶ್ನೆ ಪತ್ರಿಕೆ

"ಇದು ಈ ವರ್ಷದ ಪ್ರಶ್ನೆ ಪತ್ರಿಕೆ, ದುಡ್ಡು ಕೊಟ್ಟರೆ ಪ್ರಶ್ನೆ ಪತ್ರಿಕೆ ಸಿಗುತ್ತದೆ’’ ಎಂದು ವೈರಲ್ ಮಾಡುತ್ತಿದ್ದಾರೆ. ಇದರಿಂದ ಮೋಸ ಹೋಗುತ್ತಿರುವ ವಿದ್ಯಾರ್ಥಿಗಳು, ನಕಲಿ ಪ್ರಶ್ನೆಪತ್ರಿಕೆಗಳನ್ನು ನಂಬಿ ಓದಿಕೊಂಡು ಹೋಗಿ ಮೋಸ ಹೋಗುತ್ತಿದ್ದಾರೆ.


ಮಾರ್ಚ್‌ 21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ನಕಲಿ ಪ್ರಶ್ನೆಪತ್ರಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ಇದರಿಂದ ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಪರೀಕ್ಷಾ ಭೀತಿಯ ನಡುವೆ ಇಂತಹ ನಕಲಿ ಪ್ರಶ್ನೆಪತ್ರಿಕೆಗಳು ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿಸುತ್ತಿವೆ. ಆದರೆ ಈ ಬಗ್ಗೆ ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ.

ಕಿಡಿಗೇಡಿಗಳು ಹಳೆಯ ಪ್ರಶ್ನೆ ಪತ್ರಿಕೆ ಎಡಿಟ್ ಮಾಡಿ, ‘‘ಇದು ಈ ವರ್ಷದ ಪ್ರಶ್ನೆ ಪತ್ರಿಕೆ, ದುಡ್ಡು ಕೊಟ್ಟರೆ ಪ್ರಶ್ನೆ ಪತ್ರಿಕೆ ಸಿಗುತ್ತದೆ’’ ಎಂದು ವೈರಲ್ ಮಾಡುತ್ತಿದ್ದಾರೆ. ಇದರಿಂದ ಮೋಸ ಹೋಗುತ್ತಿರುವ ವಿದ್ಯಾರ್ಥಿಗಳು, ಫೇಕ್ ಪ್ರಶ್ನೆಪತ್ರಿಕೆಗಳನ್ನು ನಂಬಿ ಮೋಸ ಹೋಗುತ್ತಿದ್ದಾರೆ ಎಂದು ಪೋಷಕರ ಸಮನ್ವಯ ಸಮಿತಿ ಅಧ್ಯಕ್ಷ ಯೋಗಾನಂದ್ ಹೇಳಿದ್ದಾರೆ.

ಖಾಸಗಿ ಶಾಲೆಗಳ ಒಕ್ಕೂಟವು ಸುಳ್ಳು (ನಕಲಿ) ಪ್ರಶ್ನೆಪತ್ರಿಕೆಗಳನ್ನು ವೈರಲ್ ಮಾಡುವ ಕುರಿತು ಈಗಾಗಲೇ ಶಿಕ್ಷಣ ಇಲಾಖೆಯ ಗಮನಕ್ಕೆ ತಂದಿದೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದ ಬೇಸತ್ತ ಶಾಲೆಗಳು ಮತ್ತು ಪೋಷಕರು ಶಿಕ್ಷಣ ಸಚಿವರಿಗೆ ಪತ್ರ ಬರೆದು, ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವ ಕಿಡಗೇಡಿಗಳನ್ನು ತಕ್ಷಣ ಮಟ್ಟಹಾಕುವಂತೆ ಒತ್ತಾಯಿಸಿದ್ದಾರೆ.

ಸುಳ್ಳು ಪ್ರಶ್ನೆಪತ್ರಿಕೆಗಳನ್ನು ಹಂಚಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಮಾಡಲಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

Read More
Next Story