SSLC Result| ಬಾಗಲಕೋಟೆಯ ಅಂಕಿತಾ ಕೊನ್ನೂರ್ ರಾಜ್ಯಕ್ಕೆ ಪ್ರಥಮ, ವಿದ್ಯಾರ್ಥಿನಿಯರೇ ಮೇಲುಗೈ
x

SSLC Result| ಬಾಗಲಕೋಟೆಯ ಅಂಕಿತಾ ಕೊನ್ನೂರ್ ರಾಜ್ಯಕ್ಕೆ ಪ್ರಥಮ, ವಿದ್ಯಾರ್ಥಿನಿಯರೇ ಮೇಲುಗೈ


Click the Play button to hear this message in audio format

ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ ಫಲಿತಾಂಶವು karresults.nic.in ವೆಬ್​ಸೈಟ್​ನಲ್ಲಿ ಪ್ರಕಟಗೊಳ್ಳಲಿದೆ.

ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಯಿತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದಿದ್ದವು.

ಫಲಿತಾಂಶ ನೋಡುವುದು ಹೇಗೆ?

ಕರ್ನಾಟಕ SSLC ಫಲಿತಾಂಶ 2024 ಅಂಕಪಟ್ಟಿ ಆನ್‌ಲೈನ್‌ನಲ್ಲಿ ಲಭ್ಯವಿರುತ್ತದೆ. ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.

ಹಂತ 1: KSEAB ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

ಹಂತ 2: ಕರ್ನಾಟಕ SSLC ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3: ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡಿ

ಹಂತ 4: ಮಾರ್ಕ್‌ಶೀಟ್ ಅನ್ನು ಪ್ರದರ್ಶಿಸಲಾಗುತ್ತದೆ

ಹಂತ 5: ಹೆಚ್ಚಿನ ಉಲ್ಲೇಖಕ್ಕಾಗಿ ಮಾರ್ಕ್‌ಶೀಟ್ ಅನ್ನು ಡೌನ್‌ಲೋಡ್ ಮಾಡಿ

Live Updates

  • 9 May 2024 11:28 AM IST

    ಜಿಲ್ಲಾವಾರು ಫಲಿತಾಂಶ ಇಲ್ಲಿದೆ:

    ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ.



     


  • 9 May 2024 11:27 AM IST

    ವಿದ್ಯಾರ್ಥಿನಿಯರೇ ಮೇಲುಗೈ

    ಬಾಲಕರು: 2,87,416 (65.90%)

    ಬಾಲಕಿಯರು; 3,43,788 (81.11%)


  • 9 May 2024 11:26 AM IST

    ಈ ಬಾರಿ ರಾಜ್ಯದ ಫಲಿತಾಂಶ ಕುಸಿತ

    ರಾಜ್ಯದಲ್ಲಿ 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 2023-24 ನೇ ಸಾಲಿನ ಶೇಕಡಾವಾರು ಫಲಿತಾಂಶ 70.40ಕ್ಕೆ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.10 ಪರ್ಸೆಂಟ್ ಕುಸಿತವಾಗಿದೆ.

  • 9 May 2024 11:23 AM IST

    ಅತಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳ ವಿವಿರ

    1)ಅಂಕಿತಾ ಬಸಪ್ಪ ಕೊನ್ನೂರು (625/625) (ರಾಜ್ಯಕ್ಕೆ ಫ್ರಥಮ)

    ದ್ವೀತಿಯ ಸ್ಥಾನ 7 ವಿದ್ಯಾರ್ಥಿಗಳಿಗೆ ಹಂಚಿಕೆಯಾಗಿದೆ:

    1) ಮೇದಾ ಪಿ ಶೆಟ್ಟಿ ( ಬೆಂಗಳೂರು) 624/625

    2) ಹರ್ಷಿತಾ ಡಿಎಂ (ಮಧುಗಿರಿ)

    3)ಚಿನ್ಮಯ್ (ದಕ್ಷಿಣ ಕನ್ನಡ)

    4)ಸಿದ್ದಾಂತ್ (ಚಿಕ್ಕೊಡಿ )

    5)ದರ್ಶನ್ (ಶಿರಸಿ)

    6) ಚಿನ್ಮಯ್ (ಶಿರಸಿ)

    7)ಶ್ರೀರಾಮ್ (ಶಿರಸಿ)

  • 9 May 2024 11:16 AM IST

    ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ ಸ್ಥಾನ

    ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರ ಮೊದಲನೇ ಸ್ಥಾನಗಳಿಸಿದ್ದಾರೆ. ಬೆಂಗಳೂರಿನ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ. ಅಂಕಿತಾ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ. ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.

  • 9 May 2024 11:15 AM IST

    ದಕ್ಷಿಣ ಕನ್ನಡಕ್ಕೆ ಎರಡನೇ ಸ್ಥಾನ

    ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಗಳಿಸಿದೆ.

  • 9 May 2024 11:14 AM IST

    ಉಡುಪಿಗೆ ಮೊದಲ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ

    ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ

  • 9 May 2024 11:10 AM IST

    ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ- ವಿದ್ಯಾರ್ಥಿನಿಯರೇ ಮೇಲುಗೈ

    ಎಂದಿನಂತೆ ಈ ಬಾರಿಯೂ ಕೂಡ ಹೆಣ್ಣುಮಕ್ಕಳೇ ರಿಸಲ್ಟ್​​ನಲ್ಲಿ ಮೇಲುಗೈ ಸಾಧಿಸಿದ್ದಾರೆ. ಇನ್ನು ಉಡುಪಿಗೆ ರಾಜ್ಯದಲ್ಲಿ ಮೊದಲ ಸ್ಥಾನ ಸಿಕ್ಕಿದೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ.

  • 9 May 2024 10:37 AM IST

    ಕಳೆದ ವರ್ಷದ ಫಲಿತಾಂಶ:

    ಕಳೆದ ವರ್ಷ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಕರ್ನಾಟಕ SSLC 2023 ಪರೀಕ್ಷೆಗಳಲ್ಲಿ ಒಟ್ಟಾರೆ ಉತ್ತೀರ್ಣ ಶೇಕಡಾ 83.89%. ಈ ವರ್ಷ, ಕರ್ನಾಟಕ 10 ನೇ ತರಗತಿಯ ಒಟ್ಟಾರೆ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಮೇ 9, 2024 ರಂದು ಪ್ರಕಟಿಸಲಾಗುತ್ತಿದೆ.

  • 9 May 2024 10:10 AM IST

    ಇಂದು ಬೆಳಗ್ಗೆ 10.30ಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟ

    ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಇಂದು ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿ ನಡೆಯಲಿದೆ.

Read More
Next Story