SSLC Result| ಬಾಗಲಕೋಟೆಯ ಅಂಕಿತಾ ಕೊನ್ನೂರ್ ರಾಜ್ಯಕ್ಕೆ ಪ್ರಥಮ, ವಿದ್ಯಾರ್ಥಿನಿಯರೇ ಮೇಲುಗೈ
x

SSLC Result| ಬಾಗಲಕೋಟೆಯ ಅಂಕಿತಾ ಕೊನ್ನೂರ್ ರಾಜ್ಯಕ್ಕೆ ಪ್ರಥಮ, ವಿದ್ಯಾರ್ಥಿನಿಯರೇ ಮೇಲುಗೈ


Click the Play button to hear this message in audio format

ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ ಫಲಿತಾಂಶವು karresults.nic.in ವೆಬ್​ಸೈಟ್​ನಲ್ಲಿ ಪ್ರಕಟಗೊಳ್ಳಲಿದೆ.

ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಯಿತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದಿದ್ದವು.

ಫಲಿತಾಂಶ ನೋಡುವುದು ಹೇಗೆ?

ಕರ್ನಾಟಕ SSLC ಫಲಿತಾಂಶ 2024 ಅಂಕಪಟ್ಟಿ ಆನ್‌ಲೈನ್‌ನಲ್ಲಿ ಲಭ್ಯವಿರುತ್ತದೆ. ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.

ಹಂತ 1: KSEAB ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

ಹಂತ 2: ಕರ್ನಾಟಕ SSLC ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3: ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡಿ

ಹಂತ 4: ಮಾರ್ಕ್‌ಶೀಟ್ ಅನ್ನು ಪ್ರದರ್ಶಿಸಲಾಗುತ್ತದೆ

ಹಂತ 5: ಹೆಚ್ಚಿನ ಉಲ್ಲೇಖಕ್ಕಾಗಿ ಮಾರ್ಕ್‌ಶೀಟ್ ಅನ್ನು ಡೌನ್‌ಲೋಡ್ ಮಾಡಿ

NO MORE UPDATES
Read More
Next Story