K.N. Rajanna should be punished for telling the truth about Congresss shortcomings: Vijayendra alleges
x

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Stampade |ವಿಜಯೋತ್ಸವ ದುರಂತ; ಹೈಕೋರ್ಟ್ ಜಸ್ಟೀಸ್‌ ನೇತೃತ್ವದಲ್ಲಿ ತನಿಖೆಗೆ ಬಿ.ವೈ.ವಿ ಒತ್ತಾಯ

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದುರ್ಘಟನೆಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.


ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಮೃತರ ಕುಟುಂಬದವರಿಗೆ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಗುರುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದುರ್ಘಟನೆಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆ ಎಂದು ವಾಗ್ದಾಳಿ ನಡೆಸಿದರು.

ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಯಿಂದ ನಡೆದರೆ ಅಪರಾಧಿ ಸ್ಥಾನದಲ್ಲಿ ಇರುವ ಮುಖ್ಯಮಂತ್ರಿಗಳು, ಮಂತ್ರಿಮಂಡಲದ ಸದಸ್ಯರನ್ನು ತನಿಖೆ ಮಾಡಲಾಗದು. ವೈಫಲ್ಯದ ಹೊಣೆ ಹೊರಲು ಸರ್ಕಾರ ಸಿದ್ಧವಿಲ್ಲ. ಸಚಿವರಿಗೆ ಜನಪರ ಕಾಳಜಿ ಬದಲು ಪ್ರಚಾರದ ಹುಚ್ಚೇ ಪ್ರಮುಖವೆನಿಸಿದೆ. ಹಾಗಾಗಿ ಹೈಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 13 ವರ್ಷದ ಬಾಲಕ ಸೇರಿ 11 ಜನರು ಮೃತಪಟ್ಟಿದ್ದಾರೆ. ರಾಜ್ಯ ಸರ್ಕಾರ ಇಷ್ಟೊಂದು ಆತುರದಲ್ಲಿ ಸಂಭ್ರಮಾಚರಣೆ ಮಾಡುವ ಜರೂರು ಏನಿತ್ತು ಎಂದು ಪ್ರಶ್ನಿಸಿದ ಅವರು, ಸರ್ಕಾರದ ನಿರ್ಧಾರವನ್ನು ಖಂಡಿಸಿದರು.

ಸಾವಿನ ಸಂಖ್ಯೆ ಐದು-ಆರರ ಕುರಿತ ಮಾಹಿತಿ ಟಿ.ವಿಗಳಲ್ಲಿ ಬರುತ್ತಿದ್ದರೂ ಉಪ ಮುಖ್ಯಮಂತ್ರಿಗಳು ಐಪಿಎಲ್‌ ಕಪ್‌ಗೆ ಮುತ್ತಿಡುತ್ತಿದ್ದರು. ವಿಧಾನಸೌಧದಲ್ಲಿ ಆಡಳಿತ ಪಕ್ಷದವರ ಸೆಲ್ಫಿಗಳ ಭರಾಟೆ ಜೋರಾಗಿತ್ತು. ಸರ್ಕಾರ ಇಷ್ಟೊಂದು ಅಮಾನವೀಯವಾಗಿ ನಡೆದುಕೊಂಡಿರುವ ಖಂಡನೀಯ ಎಂದು ಟೀಕಿಸಿದರು.

ವಿಧಾನಸೌಧದ ಮುಂದೆ ಸಂಭ್ರಮಾಚರಣೆ ಮಾಡುವ ಅಗತ್ಯ ಏನಿತ್ತು?, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ಡಿಸಿಎಂ ತೀರ್ಮಾನಿಸಿದರೇ?, ಮುಖ್ಯಮಂತ್ರಿ ತಿಳಿಸಿದರೇ?, ಯಾವಾಗ ತೀರ್ಮಾನ ಆಯಿತು ಎಂದು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದರು.

30-40 ಸಾವಿರ ಜನರನ್ನು ನಿರೀಕ್ಷಿಸಿದ್ದೆವು. ಒಂದೂವರೆಯಿಂದ 2 ಲಕ್ಷ ಜನ ಬಂದರು ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಹೇಳಿದ್ದು, ಇದು ವೈಫಲ್ಯದ ಸ್ಪಷ್ಟ ಉದಾಹರಣೆ ಎಂದು ವಿಶ್ಲೇಷಿಸಿದರು.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ. ಸರ್ಕಾರದ ಬೇಜವಾಬ್ದಾರಿಯಿಂದ 11 ಅಮಾಯಕರು ಪ್ರಾಣ ಕಳಕೊಂಡಿದ್ದು, ಸಮರ್ಪಕ ತನಿಖೆ ಆಗಲೇಬೇಕಿದೆ. ರಾಜ್ಯ ಸರ್ಕಾರ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದದು ಹೇಳಿದರು.

ಕಪ್ ನಮ್ದೇ, ತಪ್ಪು ಯಾರದು?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, 11 ಜನರ ಸಾವು ದುಃಖಕರ ಸಂಗತಿ. ಕಪ್ ನಮ್ದೇ, ಆದರೆ, ಸಾವಿನ ತಪ್ಪು ಯಾರದೆಂದು ರಾಜ್ಯದ 7 ಕೋಟಿ ಜನರು ಕೇಳುತ್ತಿದ್ದಾರೆ. ಇದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಛಲವಾದಿ ನಾರಾಯಣಸ್ವಾಮಿ ಇತರರು ಇದ್ದರು.

Read More
Next Story