ನಮ್ಮ ಗ್ಯಾರಂಟಿಗಳನ್ನು ಕದ್ದು, ́ಮೋದಿ ಗ್ಯಾರಂಟಿ ́ ಎಂದು ಹೆಸರಿಟ್ಟಿದ್ದಾರೆ: ಸಿದ್ದರಾಮಯ್ಯ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಗ್ಯಾರಂಟಿಗಳನ್ನು ಕದ್ದು, ́ಮೋದಿ ಗ್ಯಾರಂಟಿ ́ ಎಂದು ಹೆಸರಿಟ್ಟಿದ್ದಾರೆ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ನರೇಂದ್ರ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ́ಮೋದಿ ಗ್ಯಾರಂಟಿʼ ಎಂದು ಹೆಸರಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

ʻನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡುವುದಿಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ’ ಎಂದು ಹೇಳಿದರು.

‘ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದರು ಹಾಕಿದ್ರಾ’ ಎಂದು ಸಿದ್ದರಮಾಯ್ಯ ಅವರು ಪ್ರಶ್ನೆಗಳ ಸುರಿಮಳೆಗೈದರು.

ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ,ಜಾತಿ, ಎಲ್ಲಾ ವರ್ಗದವರಿಗೂ ಸೇರಿವೆ. ಸರ್ವರನ್ನು ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಸರಕಾರ ರೂಪಿಸಿ, ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ಸತ್ಯದ ದಾಖಲೆಗಳನ್ನು ಮಂಡಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಅನ್ಯಾಯವನ್ನು ನಾಡಿನ ಜನರಿಗೆ ಅರ್ಥ ಮಾಡಿಸಿ!

ರಾಜ್ಯದಿಂದ ನಾವು ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ ಕೇಂದ್ರ ವಾಪಾಸ್‌ ರಾಜ್ಯಕ್ಕೆ ಕೊಡುತ್ತಿರುವುದು ಕೇವಲ 50ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ-ಜೆಡಿಎಸ್‌ರವರು ಡಾನ್ಸ್‌ ಮಾಡುತ್ತಿದ್ದಾರೆ. ಆದರೆ ನೀವುಗಳು ಬಿಜೆಪಿ- ಜೆಡಿಎಸ್‌ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಿ ಎಂದು ಸಿದ್ದರಮಾಯ್ಯ ಹೇಳಿದರು.

Read More
Next Story