
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಮಹಾಂತೇಶ್ವರ ಜಿದ್ದಿ ಅವರ ಕಾಲಿಗೆ ಗಾಯವಾಗಿರುವುದು.
ಕಬ್ಬು ಗಲಾಟೆ; ಕಲ್ಲು ತೂರಾಟದಲ್ಲಿ ಎಎಸ್‌ಪಿಗೆ ಗಂಭೀರ ಗಾಯ
ಕುಮಾರೇಶ್ವರ ಆಸ್ಪತ್ರೆಯ ವೈದ್ಯರು ರಾತ್ರಿ ತುರ್ತು ಚಿಕಿತ್ಸೆ ನೀಡಿದರಾದರೂ, ಎಎಸ್‌ಪಿ ಅವರ ಕಾಲಿನ ಮೂಳೆಗಳು ಹಲವೆಡೆ ಮುರಿದಿರುವುದು ದೃಢಪಟ್ಟಿದೆ. ಗಾಯದ ಸ್ವರೂಪ ಗಂಭೀರವಾಗಿದ್ದರಿಂದ ಉನ್ನತ ಮಟ್ಟದ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದರು.
ಜಿಲ್ಲೆಯ ಸಮೀರವಾಡಿ ಗೋದಾವರಿ ಕಾರ್ಖಾನೆಯ ಬಳಿ ನಡೆದ ಕಲ್ಲು ತೂರಾಟದ ಘಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗುಂಪನ್ನು ನಿಯಂತ್ರಿಸಲು ಯತ್ನಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಮಹಾಂತೇಶ್ವರ ಜಿದ್ದಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಗುರುವಾರ ರಾತ್ರಿಯೇ ಬೆಂಗಳೂರಿಗೆ ರವಾನಿಸಲಾಗಿದೆ.
ಗುರುವಾರ ನಡೆದ ಪ್ರತಿಭಟನೆ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಲು ಆರಂಭಿಸಿದರು. ಈ ಸಂದರ್ಭದಲ್ಲಿ ಕರ್ತವ್ಯನಿರತರಾಗಿದ್ದ ಎಎಸ್‌ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲಿಗೆ ಕಲ್ಲು ಬಡಿದು ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಮಹಾಲಿಂಗಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ, ಹೆಚ್ಚಿನ ಆರೈಕೆಗಾಗಿ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಕುಮಾರೇಶ್ವರ ಆಸ್ಪತ್ರೆಯ ವೈದ್ಯರು ರಾತ್ರಿ ತುರ್ತು ಚಿಕಿತ್ಸೆ ನೀಡಿದರಾದರೂ, ಎಎಸ್‌ಪಿ ಅವರ ಕಾಲಿನ ಮೂಳೆಗಳು ಹಲವೆಡೆ ಮುರಿದಿರುವುದು ದೃಢಪಟ್ಟಿದೆ. ಗಾಯದ ಸ್ವರೂಪ ಗಂಭೀರವಾಗಿದ್ದರಿಂದ ಉನ್ನತ ಮಟ್ಟದ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದರು. ಈ ಹಿನ್ನೆಲೆಯಲ್ಲಿ, ಹಿರಿಯ ಅಧಿಕಾರಿಗಳ ನಿರ್ಧಾರದಂತೆ, ಗುರುವಾರ ರಾತ್ರಿಯೇ ವಿಶೇಷ ಆಂಬುಲೆನ್ಸ್ ಮೂಲಕ ಅವರನ್ನು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ಹೆಚ್ಚಿನ ಮತ್ತು ತಜ್ಞ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

