
ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗಿದೆ.
ಬೆಳಗಾವಿ| ಹಿಂಸೆಗೆ ತಿರುಗಿದ ಕಬ್ಬು ಬೆಳಗಾರರ ಪ್ರತಿಭಟನೆ
ಪ್ರತಿ ಟನ್ ಕಬ್ಬಿಗೆ 3,500 ರೂ.ಗಳ ನ್ಯಾಯಯುತ ಬೆಲೆಗೆ ಒತ್ತಾಯಿಸಿ ಆರಂಭವಾದ ಈ ಪ್ರತಿಭಟನೆಯು ಮೊದಲು ಶಾಂತಿಯುತವಾಗಿತ್ತು. ಆದರೆ, ಸರ್ಕಾರದ ನಿಷ್ಕ್ರಿಯತೆಯ ಬಗ್ಗೆ ಹೆಚ್ಚುತ್ತಿರುವ ಹತಾಶೆಯು ಜಿಲ್ಲೆಯ ಅನೇಕ ತಾಲ್ಲೂಕುಗಳಲ್ಲಿ ವ್ಯಾಪಕ ಅಶಾಂತಿ ಮತ್ತು ಸಂಚಾರ ಅಸ್ತವ್ಯಸ್ತತೆಗೆ ಕಾರಣವಾಗಿದೆ.
ಸತತ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದ ಕಬ್ಬು ಬೆಳೆಗಾರರ ಪ್ರತಿಭಟನೆಯು ಶುಕ್ರವಾರ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಬೆಳಗಾವಿ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿ ಕ್ವಿಂಟಲ್ಗೆ 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ರೈತರು ಭಾರೀ ಕಲ್ಲು ತೂರಾಟ ನಡೆಸಿದ್ದರಿಂದ ಹಲವಾರು ವಾಹನಗಳು ಜಖಂಗೊಂಡಿವೆ.
ಪ್ರತಿ ಟನ್ ಕಬ್ಬಿಗೆ 3,500 ರೂ.ಗಳ ನ್ಯಾಯಯುತ ಬೆಲೆಗೆ ಒತ್ತಾಯಿಸಿ ಆರಂಭವಾದ ಈ ಪ್ರತಿಭಟನೆಯು ಮೊದಲು ಶಾಂತಿಯುತವಾಗಿತ್ತು. ಆದರೆ, ಸರ್ಕಾರದ ನಿಷ್ಕ್ರಿಯತೆಯ ಬಗ್ಗೆ ಹೆಚ್ಚುತ್ತಿರುವ ಹತಾಶೆಯು ಜಿಲ್ಲೆಯ ಅನೇಕ ತಾಲ್ಲೂಕುಗಳಲ್ಲಿ ವ್ಯಾಪಕ ಅಶಾಂತಿ ಮತ್ತು ಸಂಚಾರ ಅಸ್ತವ್ಯಸ್ತತೆಗೆ ಕಾರಣವಾಗಿದೆ.
ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು. ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ತೀವ್ರತೆಯಿಂದಾಗಿ ಭದ್ರತಾ ಪಡೆಗಳು ಕೆಲಕಾಲ ಹಿಂದೆ ಸರಿಯಬೇಕಾಯಿತು. ಹಾನಿಗೊಳಗಾದ ವಾಹನಗಳನ್ನು ಗಮನಿಸಿ, ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ತಕ್ಷಣವೇ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಯಿತು.
ಸಚಿವರ ಕಾರಿನ ಮೇಲೆ ಚಪ್ಪಲಿ, ಬಾಟಲಿ ಎಸೆತ
ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಮತ್ತೊಂದು ಬೆಳವಣಿಗೆ ನಡೆಯಿತು. ಇಲ್ಲಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಆಗಮಿಸಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಸಮ್ಮುಖದಲ್ಲಿ ಗೊಂದಲ ಉಂಟಾಯಿತು. ಸರ್ಕಾರವು ತಮ್ಮ ಸ್ಥಿತಿಯನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ ಕೋಪಗೊಂಡ ರೈತರು, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ ಸಚಿವರ ಕಾರಿನ ಮೇಲೆ ಚಪ್ಪಲಿ ಮತ್ತು ನೀರಿನ ಬಾಟಲಿಗಳನ್ನು ಎಸೆದು ಘೋಷಣೆಗಳನ್ನು ಕೂಗಿದರು. ಪೊಲೀಸರು ತ್ವರಿತವಾಗಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಬೆಳಗಾವಿಯ ಹಲವಾರು ಭಾಗಗಳಲ್ಲಿ ರೈತರು ತಮ್ಮ ರಸ್ತೆ ತಡೆಗಳನ್ನು ಮುಂದುವರಿಸಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರ್ಯಾಕ್ಟರ್‌ಗಳು, ಎತ್ತಿನ ಬಂಡಿಗಳು ಮತ್ತು ಇತರ ವಾಹನಗಳನ್ನು ನಿಲ್ಲಿಸಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ತೀವ್ರ ಕಷ್ಟ ಅನುಭವಿಸುವಂತಾಯಿತು.
ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್ , ಪೊಲೀಸರಿಗೆ ಸಯ್ಯಮದಿಂದ ವರ್ತಿಸಬೇಕು. ರೈತರ ಮೇಲೆ ಬಲಪ್ರಯೋಗ ಮಾಡಬಾರದು ಎಂದು ಸೂಚಿಸಲಾಗಿದೆ. ಕಲ್ಲು ತೂರಾಟ ನಡೆದರು ಪೊಲೀಸರು ಸಂಯಮ ನಾವು ಲಾಠಿ ಚಾರ್ಚ್ ಮಾಡಿಲ್ಲ ಎಂದು ಸಹ ಪೊಲೀಸರ ಹೇಳಿದ್ದಾರೆ. ರೈತರು ದಯಮಾಡಿ ಪೊಲೀಸರ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ. ನಾವು ರೈತರ ಪರವಾಗಿದ್ದೇವೆ. ಸಿಎಂ ಸಹ ಹಲವು ಬಾರಿ ಹೇಳಿದ್ದಾರೆ. ನಮ್ಮ ಉದ್ದೇಶ ಸಮಸ್ಯೆ ಬಗಹರಿಸುವುದು. ಮುಖ್ಯಮಂತ್ರಿಗಳು ಸಭೆ ಕರೆದಿರುವುದು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಲು ಎಂದು ಅವರು ರೈತರಲ್ಲಿ ಮನವಿ ಮಾಡಿದ್ದಾರೆ.

