Super specialty, cancer hospital for each district: Dr. SharanPrakash Patil
x

ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ

800 ಮೆಡಿಕಲ್ ಸೀಟು ಹೆಚ್ಚಳಕ್ಕೆ ಕೇಂದ್ರಕ್ಕೆ ಸರ್ಕಾರ ಪ್ರಸ್ತಾವನೆ

ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ಸರ್ಕಾರ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮೂರು ವರ್ಷಗಳ ಅಭಿವೃದ್ಧಿ ಯೋಜನೆಗಳ ನೀಲನಕ್ಷೆ ಹಾಕಿಕೊಂಡಿದೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.


ರಾಜ್ಯದಲ್ಲಿ ಜನರ ಆರೋಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ಸರ್ಕಾರ ಮುಂದಿನ ಮೂರು ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್‌ ತಿಳಿಸಿದರು.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ಸರ್ಕಾರ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮೂರು ವರ್ಷಗಳ ಅಭಿವೃದ್ಧಿ ಯೋಜನೆಗಳ ನೀಲನಕ್ಷೆ ಹಾಕಿಕೊಂಡಿದೆ ಎಂದರು.

ಹುಬ್ಬಳ್ಳಿ, ಬೆಳಗಾವಿಯಲ್ಲಿ ಹೃದ್ರೋಗ ಆಸ್ಪತ್ರೆ

ಪ್ರತಿ ಜಿಲ್ಲೆಯಲ್ಲೂ ಎಲ್ಲರಿಗೂ, ಸುಲಭವಾಗಿ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು. ನಾಗರಿಕರ ಯೋಗ ಕ್ಷೇಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು. ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆಯನ್ನು ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಆರಂಭಿಸಲಾಗುವುದು. ಅತಿ ಶೀಘ್ರದಲ್ಲೇ ಇದು ಲೋಕಾರ್ಪಣೆಯಾಗಲಿದೆ ಎಂದು ಮಾಹಿತಿ ನೀಡಿದರು.

ಸೀಟ್‌ ಬ್ಲಾಕಿಂಗ್‌ ಇಲ್ಲ

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಶೇ.100 ಪಾರದರ್ಶಕತೆ ಇದೆ. ಯಾವುದೇ ಸೀಟ್ ಬ್ಲಾಕಿಂಗ್ ನಮ್ಮಲ್ಲಿ ಇಲ್ಲ. ಮೆರಿಟ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ (ಕೆಇಎ) ಮೆಡಿಕಲ್ ಸೀಟು ಹಂಚಿಕೆ ಮಾಡಲಾಗುತ್ತದೆ. 800 ಮೆಡಿಕಲ್ ಸೀಟು ಹೆಚ್ಚಳಕ್ಕೆ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಯುವನಿಧಿ ಯೋಜನೆಯಡಿ 2.86 ಲಕ್ಷ ಯುವಕರು ನೋಂದಣಿ

ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಈಗಾಗಲೇ ಉದ್ಘಾಟನೆ ಮಾಡಿದ್ದೇವೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಇದೆ. ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ 400 ಹಾಸಿಗೆಗಳ ಜಯದೇವ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು ಈಗಾಗಲೇ ಈ ಕಾರ್ಯ ಪ್ರಗತಿಯಲ್ಲಿದೆ. ಯುವ ನಿಧಿ ಯೋಜನೆಯಡಿಯಲ್ಲಿ 2.86 ಲಕ್ಷ ಯುವಕರು ನೋಂದಣಿಯಾಗಿದ್ದಾರೆ. ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೆ ತರಲು ಕೆಲವು ಸುಧಾರಣೆಗಳನ್ನು ತರಲಾಗುವುದು ಎಂದರು.

Read More
Next Story