Suraj Revanna Case | ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
x

Suraj Revanna Case | ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ


ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ಭಾನುವಾರ ಆಗಿರುವ ಕಾರಣ ಪೊಲೀಸರು ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.

ಜೆಡಿಎಸ್ ಕಾರ್ಯಕರ್ತ, ಸಂತ್ರಸ್ತ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್ ವಿರುದ್ಧ ದೂರು ಕೊಟ್ಟಿದ್ದರು. ಶನಿವಾರ ಸೂರಜ್ ತಮ್ಮ ವಿರುದ್ಧ ದಾಖಲಾಗಿದ್ದ ದೂರಿನ ಬಗ್ಗೆ ಹಾಸನದ ಸೆನ್ ಠಾಣೆಯಲ್ಲಿ ವಿಚಾರಣೆಗಾಗಿ ಸೂರಜ್ ರೇವಣ್ಣ ಹೋಗಿದ್ದರು. ಶನಿವಾರ ತಡರಾತ್ರಿ ವರೆಗೂ ಪೊಲೀಸರು ವಿಚಾರಣೆ ಮಾಡಿ, ಭಾನುವಾರ ಬಂಧನ ಮಾಡಿದ್ದರು.

ಭಾನುವಾರ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಯಿತು. ಆನಂತರ ಅವರನ್ನು ಹಾಸನದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ವೈದ್ಯಕೀಯ ಪರೀಕ್ಷೆ ಮಾಡಿಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಾದ ಆಲಿಸಿದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು.

ಏನಿದು ಪ್ರಕರಣ?

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಎಚ್‌ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷೆನ್ 377, 342, 506 ಅಡಿ ಪ್ರಕರಣ ದಾಖಲಾಗಿದೆ. ಜಾಮೀನು ರಹಿತ ಕೇಸ್ ಹಿನ್ನೆಲೆಯಲ್ಲಿ ನಿನ್ನೆ (ಜೂ.22 ಶನಿವಾರ) ರಾತ್ರಿ ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು ಬಳಿಕ ಸೂರಜ್‌ನನ್ನು ಅರೆಸ್ಟ್ ಮಾಡಿದ್ದಾರೆ.

ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿಯೇ ಡಾ.ಸೂರಜ್‌ ರೇವಣ್ಣನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದರು. ತಡರಾತ್ರಿವರೆಗೂ ವಿಚಾರಣೆ ನಡೆಯಿತು.

ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಹಿರಿಯ ಪುತ್ರ ಆಗಿರುವ ಎಂಎಲ್ ಸಿ ಸೂರಜ್ ರೇವಣ್ಣ ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳು, ಮೊಬೈಲ್ ಕಾಲ್ ಸೇರಿದಂತೆ ಇನ್ನಿತರೆ ದಾಖಲೆಗಳ ಸಹಿತ ಜೆಡಿಎಸ್ ಕಾರ್ಯಕರ್ತನಾಗಿರುವ ಸಂತ್ರಸ್ತನ ವಿರುದ್ಧ ದೂರು ನೀಡಲು ಬಂದಾಗ ಪೊಲೀಸ್ ಠಾಣೆಯಲ್ಲೇ ಬಂಧನ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ತಮ್ಮ ವಿರುದ್ಧ ಆರೋಪ ಕೇಳಿ ಬರ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಜೂನ್ 22ರಂದೇ ಪ್ರತಿಕ್ರಿಯೆ ನೀಡಿದ್ದು, ತನ್ನ ವಿರುದ್ಧ ಯುವಕ ಮಾಡಿದ್ದ ಆರೋಪಗಳನ್ನು ತಿರಸ್ಕರಿಸಿ ಆತನೇ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿದ್ದ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕಾನೂನಿನಲ್ಲಿ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಗೆ ಬರಲಿ ಅಂತ ಸೂರಜ್‌ ಹೇಳಿದ್ದಾರೆ.

ಸದ್ಯ ಸಲಿಂಗ ಹಗರಣದಲ್ಲಿ ಎಚ್‌.ಡಿ.ರೇವಣ್ಣ ಪುತ್ರ ಸೂರಜ್‌ ರೇವಣ್ಣ ವಿಚಾರಣೆ ನಡೆಯುತಿದ್ದು, ಈ ಮಧ್ಯೆ ಸೂರಜ್‌ ವಿರುದ್ದ ದೂರು ನೀಡಿದ್ದ ಸಂತ್ರಸ್ತ ಯುವಕನನ್ನ ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದೆ. ಸಂತ್ರಸ್ತನನ್ನ ಹಾಸನ ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯಲಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377, 342, 506 ಅಡಿ ಪ್ರಕರಣ ದಾಖಲಾಗಿದೆ.

Read More
Next Story