ಸೂರಜ್‌ ರೇವಣ್ಣ ಪ್ರಕರಣ| ನನ್ನ ಬಳಿ ಆ ತರಹದ ಪ್ರಶ್ನೆಗಳನ್ನು ಕೇಳಬೇಡಿ: ಹೆಚ್‌ಡಿ ಕುಮಾರಸ್ವಾಮಿ
x

ಸೂರಜ್‌ ರೇವಣ್ಣ ಪ್ರಕರಣ| ನನ್ನ ಬಳಿ ಆ ತರಹದ ಪ್ರಶ್ನೆಗಳನ್ನು ಕೇಳಬೇಡಿ: ಹೆಚ್‌ಡಿ ಕುಮಾರಸ್ವಾಮಿ


ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ʻʻದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ, ರಾಜ್ಯದ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ. ಅದರ ಅವಶ್ಯಕತೆ ಏನಿದೆ? ಕಾನೂನು ಇದೆ ಕಾನೂನಿನ ಅಡಿ ಎಲ್ಲವೂ ನಡೆಯಲಿದೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ನನ್ನ ಬಳಿ ಆ ತರಹದ ಪ್ರಶ್ನೆಗಳನ್ನು ಕೇಳಬೇಡಿ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

ದೇಶಾದ್ಯಂತ ಸದ್ದು ಮಾಡಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಇದೇ ವೇಳೆ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅರಕಲಗೂಡು ಮೂಲದ ಸಂತ್ರಸ್ತ ಯುವಕ ಬೆಂಗಳೂರಿನಲ್ಲಿ ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ. ತನ್ನ ಮೇಲೆ ಸೂರಜ್‌ ರೇವಣ್ಣ ಅವರು ಲೈಂಗಿಕ ದೌರ್ಜ್ಯ ನಡೆಸಿದ್ದಾರೆ ಎಂದು 16 ಪುಟಗಳ ವಿವರವಾದ ದೂರನ್ನು ನೀಡಿದ್ದಾರೆ.

ಲೈಂಗಿಕ ದೌರ್ಜನ್ಯದ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಪಕ್ಷದ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜೆಡಿಎಸ್ ಕಾರ್ಯಕರ್ತ ಮತ್ತು ಅವರ ಸಂಬಂಧಿಕರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.

Read More
Next Story