ಸೂರಜ್ ರೇವಣ್ಣ ಪ್ರಕರಣ ವಿಚಿತ್ರ, ವಿಕೃತ, ಅಸಹ್ಯಕರ: ಪ್ರಿಯಾಂಕ್ ಖರ್ಗೆ
x

ಸೂರಜ್ ರೇವಣ್ಣ ಪ್ರಕರಣ ವಿಚಿತ್ರ, ವಿಕೃತ, ಅಸಹ್ಯಕರ: ಪ್ರಿಯಾಂಕ್ ಖರ್ಗೆ


ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನವಾಗಿದೆ. ʻʻಇಂತಹ ಪ್ರಕರಣಗಳು ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻʻಈ ಪ್ರಕರಣದ ಬಗ್ಗೆ ಏನು ಮಾತನಾಡಬೇಕು ಎಂದು ತಿಳಿಯುತ್ತಿಲ್ಲ. ಇವೆಲ್ಲಾ ವಿಚಿತ್ರ, ವಿಕೃತ, ಅಸಹ್ಯ ಪಡುವ ಪ್ರಕರಣಗಳು. ಪ್ರಜ್ವಲ್, ಸೂರಜ್, ಯಡಿಯೂರಪ್ಪ ಪ್ರಕರಣಗಳಲ್ಲಿ ಯಾವುದೇ ಆಗಿರಬಹುದು. ಯಾರು ಮಾಡಿದ್ದಾರೆ, ಅವರಿಗೂ ಏನು ಅನ್ನಿಸುತ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲʼʼ ಎಂದು ಕಿಡಿ ಕಾರಿದ್ದಾರೆ.

ಏನಿದು ಪ್ರಕರಣ?

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಎಚ್‌ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷೆನ್ 377,342,506 ಅಡಿ ಪ್ರಕರಣ ದಾಖಲಾಗಿದೆ. ಜಾಮೀನು ರಹಿತ ಕೇಸ್ ಹಿನ್ನೆಲೆಯಲ್ಲಿ ನಿನ್ನೆ (ಜೂನ್ 22 ಶನಿವಾರ) ರಾತ್ರಿ ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು ಬಳಿಕ ಸೂರಜ್‌ನನ್ನು ಅರೆಸ್ಟ್ ಮಾಡಿದ್ದಾರೆ.

ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿಯೇ ಡಾ.ಸೂರಜ್‌ರೇವಣ್ಣನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು. ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಇಂದು (ಭಾನುವಾರ) ಬೆಳಿಗ್ಗೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿ, ಬಂಧಿಸಿದ್ದಾರೆ.

ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಹಿರಿಯ ಪುತ್ರ ಆಗಿರುವ ಎಂಎಲ್ ಸಿ ಸೂರಜ್ ರೇವಣ್ಣ ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳು, ಮೊಬೈಲ್ ಕಾಲ್ ಸೇರಿದಂತೆ ಇನ್ನಿತರೆ ದಾಖಲೆಗಳ ಸಹಿತ ಜೆಡಿಎಸ್ ಕಾರ್ಯಕರ್ತನಾಗಿರುವ ಸಂತ್ರಸ್ತನ ವಿರುದ್ಧ ದೂರು ನೀಡಲು ಬಂದಾಗ ಪೊಲೀಸ್ ಠಾಣೆಯಲ್ಲೇ ಬಂಧನ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ತಮ್ಮ ವಿರುದ್ಧ ಆರೋಪ ಕೇಳಿ ಬರ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಜೂನ್ 22ರಂದೇ ಪ್ರತಿಕ್ರಿಯೆ ನೀಡಿದ್ದು, ತನ್ನ ವಿರುದ್ಧ ಯುವಕ ಮಾಡಿದ್ದ ಆರೋಪಗಳನ್ನು ತಿರಸ್ಕರಿಸಿ ಆತನೇ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿದ್ದ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕಾನೂನಿನಲ್ಲಿ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಗೆ ಬರಲಿ ಅಂತ ಸೂರಜ್‌ ಹೇಳಿದ್ದಾರೆ.

ಸದ್ಯ ಸಲಿಂಗ ಕಾಮಕಾಂಡದಲ್ಲಿ ಎಚ್‌.ಡಿ.ರೇವಣ್ಣ ಪುತ್ರ ಸೂರಜ್‌ ರೇವಣ್ಣ ವಿಚಾರಣೆ ನಡೀತಿದ್ದು, ಈ ಮಧ್ಯೆ ಸೂರಜ್‌ ವಿರುದ್ದ ದೂರು ನೀಡಿದ್ದ ಸಂತ್ರಸ್ತ ಯುವಕನನ್ನ ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದೆ. ಸಂತ್ರಸ್ತನನ್ನ ಹಾಸನ ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯಲಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377,342,506 ಅಡಿ ಪ್ರಕರಣ ದಾಖಲಾಗಿದೆ.

Read More
Next Story