ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇಂದು ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ. ಸದ್ಯ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.
ಇನ್ನು ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಡಿ ಕಾಮತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನ್ಯಾಯಾಧಿಶರು ಸೂಚಿಸಿದ್ದಾರೆ. ಹೀಗಾಗಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
Next Story