ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ಆರಂಭ : ಮೊದಲ ದಿನ  22,141 ಮನೆಗಳ ಸಮೀಕ್ಷೆ
x

ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ಆರಂಭ : ಮೊದಲ ದಿನ 22,141 ಮನೆಗಳ ಸಮೀಕ್ಷೆ

ಐದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ಮಾಡುವ ಗುರಿಯಾಗಿಸಿಕೊಳ್ಳಲಾಗಿದೆ. ಎರಡು ವಾರಗಳ ಒಳಗೆ ಸಮೀಕ್ಷೆ ಮುಕ್ತಾಯ ಮಾಡುವ ಗುರಿಯನ್ನು ನೀಡಲಾಗಿದೆ.


Click the Play button to hear this message in audio format

ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯು ರಾಜ್ಯದಲ್ಲಿ ಆರಂಭಗೊಂಡಿದ್ದರೂ, ರಾಜಧಾನಿ ಬೆಂಗಳೂರಿನಲ್ಲಿ ಶನಿವಾರದಿಂದ ಪ್ರಾರಂಭವಾಗಿದ್ದು, ಮೊದಲ ದಿನ 5 ಪಾಲಿಕೆ ವ್ಯಾಪ್ತಿಯಲ್ಲಿ 22,141 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ.

ಮೊದಲ ದಿನ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಾಗಿದ್ದು, 7,082 ಮನೆಗಳಲ್ಲಿ ಸಮೀಕ್ಷೆ ಮಾಡಲಾಗಿದೆ. ಇನ್ನುಳಿದಂತೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,822, ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ 3,105, ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 5,987, ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 3,145 ಮನೆಗಳ ಸಮೀಕ್ಷೆ ನಡೆಸಲಾಗಿದೆ

ಐದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ಮಾಡುವ ಗುರಿಯಾಗಿಸಿಕೊಳ್ಳಲಾಗಿದೆ. ಎರಡು ವಾರಗಳ ಒಳಗೆ ಸಮೀಕ್ಷೆ ಮುಕ್ತಾಯ ಮಾಡುವ ಗುರಿಯನ್ನು ನೀಡಲಾಗಿದೆ. 17,500 ಅಧಿಕಾರಿ ಮತ್ತು ಸಿಬ್ಬಂದಿ ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಸೆ.22 ರಿಂದ ಬೆಂಗಳೂರು ನಗರ ಹೊರತು ಪಡಿಸಿ ರಾಜ್ಯಾದ್ಯಂತ ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಭರದಿಂದ ಸಾಗಿದೆ. 11 ದಿನದ ಬಳಿಕ ಬೆಂಗಳೂರಿನಲ್ಲಿ ಸಮೀಕ್ಷೆ ಆರಂಭಿಸಲಾಗಿದೆ.

ವಿವಿಧ ಇಲಾಖೆಗಳಿಂದ ನಿಯೋಜಿಸಲ್ಪಟ್ಟ 17,500 ಸಮೀಕ್ಷಾದಾರರಿಗೆ ಆಯಾನಗರ ಪಾಲಿಕೆಗಳಲ್ಲಿ ಒಟ್ಟು ಎರಡು ಬಾರಿ ತರಬೇತಿ ನೀಡಲಾಗಿದೆ. ಐದು ನಗರ ಪಾಲಿಕೆಗಳ ಆಯುಕ್ತರ ಮೇಲ್ವಿಚಾರಣೆಯಲ್ಲಿ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು ಮತ್ತು ಉಪ ಆಯುಕ್ತರು ಸಮೀಕಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಕೆಎಎಸ್ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳೆಂದು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಒಟ್ಟು 34 ಕೆಎಎಸ್ ಅಧಿಕಾರಿಗಳು ಸಮೀಕ್ಷಾ ಕಾರ್ಯವನ್ನು ಸುಗಮವಾಗಿ ನಿರ್ವಹಿಸಲು, ಸಮೀಕ್ಷಾದಾರರು ಮತ್ತು ಸರ್ಕಾರದ ಮಧ್ಯೆ ಸಮನ್ವಯತೆಯನ್ನು ಕಾಪಾಡುವ ಹಿತದೃಷಿಯಿಂದ ಅಧಿಕಾರಿಗಳನ್ನು ವಾರ್ಡ್ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪ್ರತಿ 15 ರಿಂದ 20 ಸಮೀಕ್ಷಾದಾರರ ಕಾರ್ಯವನ್ನು ಪರಿಶೀಲಿಸಲು ಒಬ್ಬ ಉಪ ಮೇಲಿಚಾರಕರನ್ನು ನೇಮಿಸಲಾಗಿದೆ. ಪ್ರತಿ 300 ಮನೆಗಳಿಗೆ ಒಬ್ಬರಂತೆ ಸಮೀಕ್ಷಾದಾರರನ್ನು ನಿಯೋಜಿಸಲಾಗಿದ್ದು, ಅವರು ತಮ್ಮ ವ್ಯಾಪ್ತಿಯ ಮನೆ ಮನೆಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯ ನಡೆಸಲಿದ್ದಾರೆ. ಪ್ರತಿಯೊಂದು ವಾರ್ಡ್‌ಗೆ 80 - 90 ಮಂದಿ ಗಣತಿದಾರರನ್ನು ಸಮೀಕ್ಷೆಗೆ ನೇಮಿಸಲಾಗುತ್ತಿದೆ. ನಗರದಲ್ಲಿ 32 ಲಕ್ಷ ಮನೆಗಳಿದ್ದು, ಪ್ರತಿಯೊಬ್ಬ ಗಣತಿದಾರರು 250 ಮನೆಗಳ ಸಮೀಕ್ಷೆ ನಡೆಸಲಿದ್ದಾರೆ.

Read More
Next Story