Mpox in Bangalore | ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ
x
ಮಂಕಿಪಾಕ್ಸ್‌

Mpox in Bangalore | ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ

Mpox| ಒಂದು ವೇಳೆ ಇದು ದೃಢಪಟ್ಟಲ್ಲಿ 2025ರಲ್ಲಿ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿರಲಿದೆ.


ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿಯಲ್ಲಿ ಶಂಕಿತ ಮಂಕಿಪಾಕ್ಸ್ ಸೋಂಕು ಕಾಣಿಸಿಕೊಂಡಿರುವ ಪ್ರಕರಣ ಬೆಂಗಳೂರಿನಲ್ಲಿ ಬುಧವಾರ ತಡರಾತ್ರಿ ವರದಿಯಾಗಿದೆ.

ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಒಂದು ವೇಳೆ ಇದು ದೃಢಪಟ್ಟಲ್ಲಿ 2025ರಲ್ಲಿ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದೆ.

ಕಳೆದ ವರ್ಷ ಕೆಲವು ಆಫ್ರಿಕನ್ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗಿದ್ದವು. ನಂತರ ಪಾಕಿಸ್ತಾನ ಮತ್ತು ಥಾಯ್ಲೆಂಡ್ ಸೇರಿದಂತೆ ಇತರ ದೇಶಗಳಲ್ಲಿ ಪ್ರಕರಣಗಳು ವರದಿಯಾಗಲು ಪ್ರಾರಂಭಿಸಿದಾಗ ಮಂಕಿಪಾಕ್ಸ್ ಬಗ್ಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆತಂಕ ಸೃಷ್ಟಿಯಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್​ ಅನ್ನು 2024 ರ ಆಗಸ್ಟ್​​ನಲ್ಲಿ ‘ಅಂತರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿತ್ತು.

Read More
Next Story