ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯ ಶಂಕೆ
x

ಕೊಲೆಯಾಗಿರುವ ಸುಹಾಸ್‌ ಶೆಟ್ಟಿ 

ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯ ಶಂಕೆ

ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ಕಾಣದ ಕೈಗಳ ಕೈವಾಡದ ಶಂಕೆ ವ್ಯಕ್ತವಾಗಿದ್ದು, ವಿವಿಧ ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ.


ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಲು ವಿದೇಶದಿಂದ ನೆರವು ಸಿಕ್ಕಿರುವ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪೊಲೀಸರು ಹಲವು ಬ್ಯಾಂಕ್‌ ಖಾತೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಅನೇಕ ಕಾಣದ ಕೈಗಳ ಕೈವಾಡದ ಶಂಕೆ ವ್ಯಕ್ತವಾಗಿದೆ. ಕೊಲೆಗೆ ನೆರವು ನೀಡುವಂತೆ ಪ್ರಮುಖ ಆರೋಪಿ ಸಫ್ವಾನ್ ಅನೇಕರನ್ನು ಸಂಪರ್ಕಿಸಿದ್ದ. ಆ ಸಂದರ್ಭದಲ್ಲಿ ಜೈಲು, ಜಾಮೀನು ನೆರವಿಗಾಗಿಯೂ ಕೈಚಾಚಿದ್ದ ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಕೂಡಲೇ ಪೊಲೀಸರಿಗೆ ಶರಣಾಗುವ ಬಗ್ಗೆಯೂ ಹಂತಕರ ಗುಂಪು ಚರ್ಚೆ ನಡೆಸಿತ್ತು ಎನ್ನಲಾಗಿದೆ.

ಮೂರು ತಿಂಗಳ ಹಿಂದೆಯೇ ಸುಹಾಸ್‌ ಕೊಲೆಗೆ ಸಂಚು

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ನಡೆಸಲಾಗಿತ್ತು ಎನ್ನಲಾಗಿದೆ. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ ಸೋದರ ಆದಿಲ್ 3 ಲಕ್ಷ ರೂ. ಹಣ, ಕೃತ್ಯ ನಡೆಸಲು ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರು ನೀಡಲಾಗಿತ್ತು. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಎರಡನೇ ಯೋಜನೆಯನ್ನೂ ಸಿದ್ಧ ಮಾಡಿಕೊಂಡಿದ್ದರು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸುಹಾಸ್ ಶೆಟ್ಟಿ ಚಲನವಲನಗಳ ಮೇಲೆ ಆರೋಪಿ ಸಫ್ವಾನ್ ಕಳೆದ 15 ದಿನಗಳಿಂದ ಗಮನ ಇರಿಸಿದ್ದ. ಚಿಕ್ಕಮಗಳೂರಿನ ಕಳಸಾದ ರಂಜಿತ್ ಹಾಗೂ ನಾಗರಾಜ್ 15 ದಿನಗಳಿಂದ ಸಫ್ವಾನ್ ಮನೆಯಲ್ಲೇ ಇದ್ದರು. ಸುಹಾಸ್ ಶೆಟ್ಟಿ ಬಜ್ಪೆಗೆ ಬರುವ ಬಗ್ಗೆ ಅಜರುದ್ಧಿನ್ ಮಾಹಿತಿ ನೀಡಿದ್ದ. ಎಷ್ಟು ಗಂಟೆಗೆ ಸುಹಾಸ್ ಹೊರಡುತ್ತಾನೆ, ಅವನೊಂದಿಗೆ ಯಾರಿದ್ದಾರೆ ಎಂಬುದನ್ನು ಸಫ್ವಾನ್​​ಗೆ ಮಾಹಿತಿ ನೀಡಿದ್ದ. ಸುಹಾಸ್ ಶೆಟ್ಟಿ ಹತ್ಯೆಯಾಗುತ್ತಿದ್ದಂತೆಯೇ ಅಜರುದ್ದೀನ್ ತಲೆ ಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಮಂಗಳೂರು ಪೊಲೀಸರ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಪ್ರವೀಣ್​ ನೆಟ್ಟಾರ್​ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಫಾಜಿಲ್‌ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಸುಹಾಸ್‌ ಶೆಟ್ಟಿಯೇ ಎ-1 ಆರೋಪಿಯಾಗಿದ್ದ. ಅಲ್ಲದೇ ಕೀರ್ತಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದರು.

Read More
Next Story