
ಕೆಫೆಟೇರಿಯಾ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಿದ್ದಾಗ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಬೆಂಗಳೂರು| ಬಯೋಕಾನ್ ಕಂಪನಿಯ ಕಟ್ಟಡದಿಂದ ಬಿದ್ದು ಟೆಕ್ಕಿ ದಾರುಣ ಸಾವು
ಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬಯೋಕಾನ್ (Biocon) ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 35 ವರ್ಷದ ಟೆಕ್ಕಿ ಅನಂತ ಭಟ್, ಮಂಗಳವಾರ ಮಧ್ಯಾಹ್ನ ಕಂಪನಿಯ ಐದನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.
ಬಯೋಕಾನ್ ಕಂಪನಿಯ ಐದನೇ ಮಹಡಿಯಿಂದ ಕೆಳಗೆ ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಮೃತರನ್ನು ಅನಂತ ಭಟ್ (35) ಎಂದು ಗುರುತಿಸಲಾಗಿದೆ. ಅವರು ಬಯೋಕಾನ್ ಕಂಪನಿಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನದ ವೇಳೆಗೆ ಕಂಪನಿಯ ಕೆಫೆಟೇರಿಯಾ ಭಾಗದ ಬಾಲ್ಕನಿಯಲ್ಲಿ ನಿಂತು ತಮ್ಮ ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಮಾತನಾಡುತ್ತಿರುವಾಗ ಆಕಸ್ಮಿಕವಾಗಿ ಆಯತಪ್ಪಿ ಐದನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದು ಆತ್ಮಹತ್ಯೆಯೇ ಅಥವಾ ಆಕಸ್ಮಿಕ ಅಪಘಾತವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಷಯ ತಿಳಿದ ತಕ್ಷಣ ಹೆಬ್ಬಗೋಡಿ ಮತ್ತು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗೆಳತಿ ಹಾಗೂ ಕಂಪನಿಯ ಸಹೋದ್ಯೋಗಿಗಳಿಂದ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಮುಂದುವರಿದಿದೆ.
(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)

