Three youths from the state die in car accident in Andhra
x

ಸಾಂದರ್ಭಿಕ ಚಿತ್ರ

Tumkur Accident| ತುಮಕೂರಿನಲ್ಲಿ ಭೀಕರ ಅಪಘಾತ: ಮೂವರು ಬೈಕ್ ಸವಾರರ ಸಾವು

ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ. ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.


ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ. ಪೆಟ್ರೋಲ್ ಬಂಕ್‌ನಿಂದ ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ಧನಂಜಯ್ (27), ಮತ್ತು ಧನುಷ್ (23)** ಎಂದು ಗುರುತಿಸಲಾಗಿದೆ. ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸದ್ಯ, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಎಎಸ್‌ಪಿ ಗೋಪಾಲ್ ಮತ್ತು ಡಿವೈಎಸ್‌ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More
Next Story