ಭೂತಾನ್‌ ಅಡಿಕೆ ಆಮದಿಗೆ ಕೇಂದ್ರ ಸರ್ಕಾರ ಅನುಮತಿ
x
ಅಡಿಕೆ

ಭೂತಾನ್‌ ಅಡಿಕೆ ಆಮದಿಗೆ ಕೇಂದ್ರ ಸರ್ಕಾರ ಅನುಮತಿ

ಭೂತಾನ್‌ನಿಂದ ಕನಿಷ್ಠ ಆಮದು ಬೆಲೆಯ (ಎಂಐಪಿ) ಷರತ್ತು ಇಲ್ಲದೆಯೇ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.


Click the Play button to hear this message in audio format

ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ (ಎಂಐಪಿ) ಷರತ್ತು ಇಲ್ಲದೆಯೇ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರವು ಇತ್ತೀಚೆಗೆ ಅನುಮತಿ ನೀಡಿದೆ.

ಒಡಿಶಾದ ಹಾತಿಸರ್ ಮತ್ತು ಅಸ್ಸಾಂನ ದರ್ರಂಗದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದಿಗೆ ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಅಧೀನದಲ್ಲಿ ಬರುವ ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್‌ಟಿ) ತಿಳಿಸಿದೆ.

2022ರ ಸೆಪ್ಟೆಂಬರ್‌ನಲ್ಲಿ ಪ್ರತಿ ವರ್ಷ ಭೂತಾನ್‌ನಿಂದ ಎಂಐಪಿ ಇಲ್ಲದೆ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿತ್ತು. 2017ರಲ್ಲಿ ಕೇಂದ್ರ ಸರ್ಕಾರವು ಪ್ರತಿ ಕೆ.ಜಿ ಅಡಿಕೆಗೆ 251 ರೂ ಕನಿಷ್ಠ ಆಮದು ಬೆಲೆ ನಿಗದಿಪಡಿಸಿದೆ. ಕಳೆದ ವರ್ಷ ಈ ಬೆಲೆಯನ್ನು ಕೆ.ಜಿಗೆ 351ರೂಗೆ ಹೆಚ್ಚಿಸಿದೆ. ದೇಶದ ಬೆಳೆಗಾರರ ಹಿತಕಾಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ. ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿಕೊಂಡರೂ ಈ ಬೆಲೆಗಿಂತ ಕಡಿಮೆಗೆ ಆಮದು ಮಾಡಿಕೊಳ್ಳಬಾರದು ಎಂದು ಹೇಳಿದೆ.

ದೇಶದಲ್ಲಿ ಅಡಿಕೆ ಅಕ್ರಮ ಆಮದು ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಸರ್ಕಾರವು ನೀಡಿರುವ ಈ ಅನುಮತಿಯು ರಾಜ್ಯ ಬೆಳೆಗಾರರನ್ನು ನಿದ್ದೆಗೆಡಿಸಿದೆ. ಈಗಾಗಲೇ ಅಡಿಕೆ ಮರಗಳಿಗೆ ಎಲೆಚುಕ್ಕಿ ಕೊಳೆ ರೋಗ ಕಾಣಿಸಿಕೊಂಡಿದ್ದು ಬೆಳೆಗಾರರು ನಷ್ಟಕ್ಕೆ ಸಿಲುಕಿಸಿದ್ದಾರೆ.

ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ಅಡಿಕೆಯ ಪೈಕಿ ಶೇ 2ರಷ್ಟು ಅಡಿಕೆಯನ್ನಷ್ಟೇ ಭೂತಾನ್‌ನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ವರ್ತಕರು ಸರ್ಕಾರದ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ವರ್ಷದಿಂದ ವರ್ಷಕ್ಕೆ ಅಡಿಕೆ ಅಕ್ರಮ ಆಮದು ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ಸರ್ಕಾರವು ಸಂಸತ್‌ಗೆ ಸಲ್ಲಿಸಿರುವ ಉತ್ತರದಲ್ಲಿ ತಿಳಿಸಿದೆ.

ದೇಶದಲ್ಲಿ ಕಳೆದ ಐದು ವರ್ಷದಲ್ಲಿ ಕೇಂದ್ರೀಯ ಪರೋಕ್ಷ ತೆರಿಗೆಗಳು ಹಾಗೂ ಕಸ್ಟಮ್ಸ್ ಮಂಡಳಿಯ ತನಿಖಾ ತಂಡವು 26 ಸಾವಿರ ಟನ್‌ಗೂ ಹೆಚ್ಚು ಅಡಿಕೆಯನ್ನು ವಶಕ್ಕೆ ಪಡೆದಿದೆ.

Read More
Next Story