ರಾಜ್ಯಾದ್ಯಂತ ಕಬಾಬ್, ಮೀನು, ಕೋಳಿ ಖಾದ್ಯಗಳಿಗೆ ಕೃತಕ ಬಣ್ಣ ನಿರ್ಬಂಧಿಸಿದ ಸರ್ಕಾರ
ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ ಕೃತಕ ಬಣ್ಣ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ. ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಲಾಗಿತ್ತು. ಇದೀಗ ಕಬಾಬ್, ಫಿಶ್, ಚಿಕನ್‌ಗೆ ಕೃತಕ ಬಣ್ಣ ಬಳಕೆ ಬ್ಯಾನ್ ಮಾಡಲಾಗಿದೆ.
ಸರ್ಕಾರದ ಆದೇಶದಲ್ಲಿ ಏನಿದೆ?
ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ - 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದ್ದು, The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.
The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ರನ್ವಯ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006 2 2 3 (1)(zz)(viii) The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ಗಳಡಿ ಅವಕಾಶವಿಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆದೇಶಿಸಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.