Waqf Asset Issue | ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ
x

Waqf Asset Issue | ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಹಾವೇರಿಯ ಸಿಇಎನ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.


ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾದ ಹಿನ್ನೆಲೆಯಲ್ಲಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸುಳ್ಳು ಸುದ್ದಿ ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಹಾವೇರಿಯ ಸಿಇಎನ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ತೇಜಸ್ವಿ ಸೂರ್ಯ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತಮ್ಮ ಕಕ್ಷಿದಾರರು ಮೃತ ರೈತನ ತಂದೆಯ ಹೇಳಿಕೆ ಆಧರಿಸಿ ಟ್ವೀಟ್ ಮಾಡಿದ್ದರು. ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಸಹ ಮಾಡಿದ್ದರು. ಆದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಹಾಗಾಗಿ ಪ್ರಕರಣಕ್ಕೆ ತಡೆ ನೀಡುವಂತೆ ತೇಜಸ್ವಿ ಸೂರ್ಯ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ನ್ಯಾಯಾಲಯ ಗಮನ ಸೆಳೆದರು.

ಇದನ್ನು ಮಾನ್ಯ ಮಾಡಿದ ಹೈಕೋರ್ಟ್, ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ. ತೇಜಸ್ವಿ ಸೂರ್ಯ ವಿರುದ್ಧ 174 ಸಿಆರ್ಪಿಸಿ ಅಡಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಂಡ ಸಂದರ್ಭದಲ್ಲಿ ಹಾವೇರಿಯ ಹರನಗೇರಿ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದರು. ರೈತರಿಗೆ ವಕ್ಫ್ ನೋಟಿಸ್ ಬಂದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಸ್ಪಷ್ಟನೆ ನೀಡಿದ್ದ ಹಾವೇರಿ ಪೊಲೀಸರು, 2022ರಲ್ಲಿ ಪಡೆದಿದ್ದ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ರೈತ ಕುಟುಂಬ, ತಮ್ಮ ಜಮೀನಿನ ಪಹಣಿಯಲ್ಲಿ ವಕ್ಪ್ ಆಸ್ತಿ ಎಂದು ನಮೂದಾಗಿದ್ದರಿಂದಲೇ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಕ್ಪ್ ಬೋರ್ಡ್ ನಿಂದ ಅನ್ಯಾಯವಾಗಿದೆ ದೂರಿದ್ದರು.

Read More
Next Story