Weather Update| ಬೆಂಗಳೂರು ಸೇರಿ ಹಲವಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ  ಮುನ್ಸೂಚನೆ
x

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 

Weather Update| ಬೆಂಗಳೂರು ಸೇರಿ ಹಲವಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರಿನಲ್ಲಿ ಸದ್ಯ ಮೋಡ ಕವಿದ ವಾತಾವರಣವಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗಿದ್ದು, ಸೋಮವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿ ವಿವಿಧೆಡೆ 5 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿ ನೀಡಿದೆ.

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಮಳೆ ಬರುವ ಮುನ್ಸೂಚನೆ ಇದೆ. ಆದರೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಬರಲಿದೆ. ಇದನ್ನು ಹೊರತುಪಡಿಸಿ ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ಸದ್ಯ ಮೋಡ ಕವಿದ ವಾತಾವರಣವಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗಿದ್ದು, ಸೋಮವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Read More
Next Story