SSLC-2 Exam| ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಆರಂಭ
x

 ಎಸ್‌ ಎಸ್‌ ಎಲ್‌ ಸಿ - 2ಪರೀಕ್ಷೆಗಳು ಆರಂಭಗೊಳ್ಳಲಿವೆ. 

SSLC-2 Exam| ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಆರಂಭ

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ.26ರಿಂದ ಜೂನ್​ 2 ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:15 ವರೆಗೆ ಪರೀಕ್ಷೆ ನಡೆಯಲಿದೆ.


ರಾಜ್ಯದಲ್ಲಿ ಸೋಮವಾರದಿಂದ (ಮೇ 26, 2025) ಎಸ್​ಎಸ್​ಎಲ್​​ಸಿ ಪರೀಕ್ಷೆ 2 ಆರಂಭಗೊಂಡಿದೆ. ರಾಜ್ಯದಾದ್ಯಂತ ಒಟ್ಟು 967 ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆಯುತ್ತಿದ್ದು, ಪ್ರಥಮ ಭಾಷಾ ಪರೀಕ್ಷೆ ನಡೆಯುತ್ತಿದೆ. ಈ ಬಾರಿಯ ಪರೀಕ್ಷೆಗೆ ಒಟ್ಟು 3.16 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 26 ರಿಂದ ಜೂನ್ 2, 2025ರವರೆಗೆ ಪರೀಕ್ಷೆಗಳನ್ನು ನಡೆಸುತ್ತಿದೆ. ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ರವರೆಗೆ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆ-1ರಲ್ಲಿ ಒಟ್ಟು 8,42,174 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 5,24,984 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, 3,17,189 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಅನುತ್ತೀರ್ಣರಾದ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷೆ-2ರ ವಿಷಯವಾರು ವೇಳಾಪಟ್ಟಿ

ಮೇ 26, 2025 (ಸೋಮವಾರ): ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್.ಸಿ.ಇ.ಆರ್.ಟಿ, ಸಂಸ್ಕೃತ.

ಮೇ 27, 2025 (ಮಂಗಳವಾರ): ಗಣಿತ, ಸಮಾಜ ಶಾಸ್ತ್ರ.

ಮೇ 28, 2025 (ಬುಧವಾರ): ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ.

ಮೇ 29, 2025 (ಗುರುವಾರ): ಸಮಾಜ ವಿಜ್ಞಾನ.

ಮೇ 30, 2025 (ಶುಕ್ರವಾರ): ತೃತೀಯ ಭಾಷೆ- ಹಿಂದಿ ಎನ್.ಸಿ.ಇ.ಆರ್.ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಜೊತೆಗೆ, ಎನ್.ಎಸ್.ಕ್ಯೂ.ಎಫ್ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಫ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್‌ವೇರ್ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಕ್ರಮಗಳು

ಪರೀಕ್ಷೆಯ ಹಿನ್ನೆಲೆಯಲ್ಲಿ, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವುದು ಕಡ್ಡಾಯವಾಗಿದೆ. ಸಿಸಿಟಿವಿಗಳು ಪರೀಕ್ಷಾ ಅವಧಿಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲಾ ಪಂಚಾಯತ್‌ನ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

Read More
Next Story