Weather Update| ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಸಾಧ್ಯತೆ
x

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

Weather Update| ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಸಾಧ್ಯತೆ

ಕರ್ನಾಟಕದ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ರಾಜ್ಯದಲ್ಲಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದಿನಿಂದ ಭಾರೀ ಮಳೆ

ಉತ್ತರ ಕನ್ನಡ ಜಿಲ್ಲೆ, ಅಥಣಿ ಬೆಳಗಾವಿ ಜಿಲ್ಲೆ, ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಗದಗ ಜಿಲ್ಲೆಯ ಬೆಳ್ಳಟ್ಟಿ ಭಾಗದಲ್ಲಿ ಮಳೆಯಾಗಿದೆ. ಇಂದು ಕರ್ನಾಟಕದ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಈ ಜಿಲ್ಲೆಗಳಿಗೆ ಮಳೆಯ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಮಳೆಯಾಗಲಿದೆ. ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ, ತುಮಕೂರು, ಕೋಲಾರ, ಮಂಡ್ಯ, ಮೈಸೂರಲ್ಲೂ ಕೂಡ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

ಮುಂಗಾರು ಮಳೆಯ ಆರಂಭದಲ್ಲೇ ಪ್ರವಾಹ ಭೀತಿ ಶುರುವಾಗಿದ್ದು, ಭೂಕುಸಿತದ ಭಯ ಕರಾವಳಿ ಭಾಗದ ಜನರಲ್ಲಿ ಮನೆ ಮಾಡಿದೆ. ಸಾವು-ನೋವುಗಳು ವರದಿಯಾದ ಬಳಿಕ ಜನರು ಕೂಡ ಆತಂಕಗೊಂಡಿದ್ದಾರೆ. ಈ ಬಾರಿ ಮುಂಗಾರು ಮಳೆ ಎಡೆ ಬಿಡದೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಲಪ್ರಳಯದ ಭಯ ಜನರಲ್ಲಿ ಆವರಿಸಿದೆ.

ಬೆಂಗಳೂರಿನಲ್ಲೂ ಮಳೆ

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​ಘೋಷಣೆ ಮಾಡಲಾಗಿದೆ.

Read More
Next Story