Siddaramaiah Defends Dinner Meet, Asks Is Eating Together a Big Offence
x

ಸಿಎಂ ಸಿದ್ದರಾಮಯ್ಯ

ನವೆಂಬರ್‌ನಲ್ಲಿ ಕ್ರಾಂತಿಯಿಲ್ಲ, ಅದೆಲ್ಲಾ ಭ್ರಾಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

"2026ರ ಮೈಸೂರು ದಸರಾ ಮಹೋತ್ಸವಕ್ಕೂ ನಾನೇ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುತ್ತೇನೆ" ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಯ ಚರ್ಚೆಗಳಿಗೆ ಪೂರ್ಣವಿರಾಮ ಹಾಕುವ ಪ್ರಯತ್ನ ಮಾಡಿದ್ದರು.


Click the Play button to hear this message in audio format

"ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ಯಾವುದೇ ಕ್ರಾಂತಿ ನಡೆಯುವುದಿಲ್ಲ, ಅದೆಲ್ಲವೂ ಕೇವಲ ಭ್ರಾಂತಿ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದ ಅವರು, ಈ ರೀತಿಯ ಸುದ್ದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ತಿಂಗಳು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಚರ್ಚೆಗಳು ಕೇವಲ ಊಹಾಪೋಹಗಳಷ್ಟೇ ಎಂದು ಹೇಳಿದರು. "ನವೆಂಬರ್‌ಗೆ ಕ್ರಾಂತಿ ಎನ್ನುವುದು ಸುಳ್ಳು ಸುದ್ದಿ," ಎಂದು ಅವರು ಖಚಿತವಾಗಿ ತಿಳಿಸಿದರು.

ತಾವೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ಈಗಾಗಲೇ ಹಲವು ಬಾರಿ ಪುನರುಚ್ಚರಿಸಿರುವ ಸಿದ್ದರಾಮಯ್ಯ, ಮೂರು ದಿನಗಳ ಹಿಂದೆ ಮೈಸೂರಿನಲ್ಲಿ ಮಾತನಾಡುತ್ತಾ, "2026ರ ಮೈಸೂರು ದಸರಾ ಮಹೋತ್ಸವಕ್ಕೂ ನಾನೇ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುತ್ತೇನೆ" ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಯ ಚರ್ಚೆಗಳಿಗೆ ಪೂರ್ಣವಿರಾಮ ಹಾಕುವ ಪ್ರಯತ್ನ ಮಾಡಿದ್ದರು. ಈ ಹೇಳಿಕೆಯು, ತಾವು ನಿಗದಿತ ಅವಧಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರೆಯುವ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.

Read More
Next Story